RRB NTPC 2024 : ರೈಲ್ವೆ ನೇಮಕಾತಿ ಮಂಡಳಿ (RRBs) NTPC ನೇಮಕಾತಿ 2024 ಕ್ಕೆ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 11558 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವೀಧರರಿಗಾಗಿ 8113 ಹುದ್ದೆಗಳು ಮತ್ತು ಪದವಿಪೂರ್ವ ವಿದ್ಯಾಭ್ಯಾಸ ಮುಗಿಸಿದವರಿಗೆ 3,445 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement
ಭಾರತೀಯ ರೈಲ್ವೆ ಇಲಾಖೆಯು ಇದೀಗ ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ’ಯ ವಿವಿಧ ಹುದ್ದೆಗಳ ಭರ್ತಿಗೆ ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಒಟ್ಟಾರೆ 11,558 ಎನ್ಟಿಪಿಸಿ ಪೋಸ್ಟ್ಗಳಿಗೆ ಅಧಿಸೂಚಿಸಿದ್ದು, ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಕುರಿತ ವಿವರ ಕೆಳಗಿನಂತಿದೆ.ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
I) ಗ್ರಾಜುಯೇಟ್ ವಿದ್ಯಾರ್ಹತೆ ಹುದ್ದೆಗಳು.
ಸ್ಟೇಷನ್ ಮಾಸ್ಟರ್ – 994.
ಗೂಡ್ಸ್ ಟ್ರೈನ್ ಮ್ಯಾನೇಜರ್ – 3144.
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್ – 1507.
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 732.
Ii) ಪಿಯುಸಿ ವಿದ್ಯಾರ್ಹತೆ ಹುದ್ದೆಗಳು.
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ – 361
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 990
ಟ್ರೈನ್ ಕ್ಲರ್ಕ್ – 72
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅರ್ಹತೆ / ಇತರೆ ಹಿಂದುಳಿದ ವರ್ಗದವರಿಗೆ ರೂ.500.
ii) ಎಸ್ಸಿ / ಎಸ್ಟಿ / ಮಾಜಿ ಸೈನಿಕ / ಪಿಡಬ್ಲ್ಯೂಡಿ / ಮಹಿಳಾ / ಟ್ರಾನ್ಸ್ಜೆಂಡರ್ / ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರೂ.250.
( ಪರೀಕ್ಷೆ ಬರೆದವರಿಗೆ ಮಾತ್ರ ಅರ್ಜಿ ಶುಲ್ಕ ಮರುಪಾವತಿ ಮಾಡಲಾಗುತ್ತದೆ.)
ಗಮನಿಸಿ:
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಅಧಿಕೃತ ವೆಬ್ಸೈಟ್ https://www.rrbbnc.gov.in/ ಪರಿಶೀಲಿಸಿ.
RRB ಅಧಿಕೃತ ವೆಬ್ಸೈಟ್ rrbapply.gov.in ಗೆ ಭೇಟಿ ನೀಡಿ.
ಅರ್ಜಿ ಹಾಕಲು ನಿಗದಿತ ದಿನಾಂಕಗಳು
ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : 21-09-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-10-2024 ರ ರಾತ್ರಿ 11-59 ಗಂಟೆವರೆಗೆ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473