RECRUITMENT OF OFFICERS : ಇಂಡಿಯಾ ಎಕ್ಸಿಮ್ ಬ್ಯಾಂಕ್ ವಿವಿಧ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಎಕ್ಸಿಮ್ ಬ್ಯಾಂಕ್ 1982 ರಲ್ಲಿ ಸ್ಥಾಪಿಸಲಾದ ಭಾರತದಲ್ಲಿನ ವಿಶೇಷ ಹಣಕಾಸು ಸಂಸ್ಥೆಯಾಗಿದೆ. ಬ್ಯಾಂಕಿನ ಪ್ರಾಥಮಿಕ ಕಾರ್ಯವು ಭಾರತದ ಅಂತರರಾಷ್ಟ್ರೀಯ ವ್ಯಾಪಾರಕ್ಕೆ ಹಣಕಾಸು, ಅನುಕೂಲ ಮತ್ತು ಉತ್ತೇಜಿಸುವುದು. ಇದು ಭಾರತ ಸರ್ಕಾರದ ಒಡೆತನದಲ್ಲಿದೆ ಮತ್ತು ಶಾಸನಬದ್ಧ ನಿಗಮವಾಗಿ ಕಾರ್ಯನಿರ್ವಹಿಸುತ್ತದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್ ಗುತ್ತಿಗೆ ಆಧಾರದಲ್ಲಿ ವಿವಿಧ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಲು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement
ಇಂಡಿಯಾ ಎಕ್ಸಿಮ್ ಬ್ಯಾಂಕ್ ಗುತ್ತಿಗೆ ಆಧಾರದಲ್ಲಿ ವಿವಿಧ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಲು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಆಫೀಸರ್ (ಅಡ್ಮಿನಿಸ್ಟ್ರೇಷನ್) -1
ii) ಬ್ಯುಸಿನೆಸ್ ಡೆವಲಪ್ಮೆಂಟ್ ಆಫೀಸರ್ – 1
iii) ಆಫೀಸರ್ (ಕಾಂಪ್ಲಿಯನ್ಸ್) – 2
iv) ಆಫೀಸರ್ (ಕಾರ್ಪೋರೇಟ್ ಕಂಮ್ಯುನಿಕೇಷನ್ಸ್) – 2
v) ಆಫೀಸರ್ (ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ) – 1
vi) ಆಫೀಸರ್ (ಡಿಜಿಟಲ್ ಟೆಕ್ನಾಲಜಿ ಫಿನಾಕಲ್ ಟ್ರೆಸರಿ) – 8
vii) ಆಫೀಸರ್ (ಡಿಜಿಟಲ್ ಟೆಕ್ನಾಲಜಿ ಇನ್ಫಾಸ್ಟ್ರಕ್ಚರ್) -1
viii) ಆಫೀಸರ್ (ಡಿಜಿಟಲ್ ಟೆಕ್ನಾಲಜಿ ಅಪ್ಲಿಕೇಶನ್ ಮ್ಯಾನೇಜರ್) – 2
ix) ಎನ್ವಿರಾನ್ಮೆಂಟಲ್ ಸೋಷಿಯಲ್ ಅಂಡ್ ಗವರ್ನೆನ್ಸ್ (ಇಎಸ್ಜಿ) ಕಾಂಪ್ಲಿಯನ್ಸ್ – 2
x) ಆಫೀಸರ್ – ಎಕ್ಸಿಮ್ ಮಿತ್ರ – 5
xi) ಆಫೀಸರ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ – 2
xii) ಆಫೀಸರ್ – ಲೀಗಲ್ – 8
xiii) ಆಫೀಸರ್ (ಲೋನ್ ಆಪರೇಷನ್ಸ್ ಅಂಡ್ ಲೋನ್ ಮಾನಿಟರಿಂಗ್) – 15
xiv) ಆಫೀಸರ್ (ಮಾರ್ಕೆಟಿಂಗ್ ಅಡ್ವೈಸರಿ ಸರ್ವೀಸ್ ) – 1
(ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮ / ಡಿಗ್ರಿ / ಸ್ನಾತಕೋತ್ತರ ಪದವಿಗಳನ್ನು (ಎಂಬಿಎ, ಪಿಜಿಡಿಎಂ, ಹಣಕಾಸು, ಮಾರ್ಕೆಟಿಂಗ್, ಪಿಜಿಡಿಬಿಎ, ಸಿಎ, ಎಂಎಸ್ಡಬ್ಲ್ಯೂ, ಸೋಷಿಯಲ್ ವರ್ಕ್) ಪಡೆದಿರಬೇಕು.)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.600.
ii) ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600.
iii) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ರೂ.100.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14-10-2024
ಲಿಖಿತ ಪರೀಕ್ಷೆಯ ಸಂಭಾವ್ಯ ದಿನಾಂಕವು ಅಕ್ಟೋಬರ್ 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://www.eximbankindia.in/) ಅನ್ನು ಪರಿಶೀಲಿಸಿ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ.
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473