ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು 2975 ಹುದ್ದೆಗಳ ಭರ್ತಿಗೆ ಇಂದಿನಿಂದ ಅರ್ಹರಿಂದ ಅರ್ಜಿ ಸ್ವೀಕಾರ ಮಾಡಲಿದೆ. ಅರ್ಜಿ ಹಾಕುವ ವಿಧಾನ, ಇತರೆ ಡೀಟೇಲ್ಸ್ ಇಲ್ಲಿ ನೀಡಲಾಗಿದೆ. ಎಸ್ಎಸ್ಎಲ್ಸಿ ಪಾಸಾದವರು ಈ ಸರ್ಕಾರಿ ಉದ್ಯೋಗ ಅವಕಾಶವನ್ನು ಮಿಸ್ ಮಾಡದೇ ಪಡೆಯಲು ಪ್ರಯತ್ನಿಸಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ 7892810864





ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ಮ್ಯಾನ್-ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಿರಿಯ ಸ್ಟೇಷನ್ ಪರಿಚಾರಕ – 433 (411 NKK +22KK)
ii) ಕಿರಿಯ ಪವರ್ಮ್ಯಾನ್- 2542 (2349NKK +193KK)
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಪಾಸ್ .
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.614.
ii) ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.614
iii) ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.378.
iv) ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-11-2024
ಗಮನಿಸಿ:
ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಕವಿಪ್ರನಿನಿಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದು ಅರ್ಜಿಗಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ, ಕೊನೆಯದಾಗಿ ಸಲ್ಲಿಸಿದ ಅರ್ಜಿ ಪರಿಗಣಿಸಲಾಗುವುದು.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಪಿಟಿಸಿಎಲ್ ಹುದ್ದೆಗೆ ಅರ್ಜಿ ಸಲ್ಲಿಸಲು https://kptcl.karnataka.gov.in ಗೆ ಭೇಟಿ ನೀಡಿ.
ii) ಇತರೆ ವಿದ್ಯುತ್ ಪ್ರಸರಣ ನಿಗಮಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ ವಿಳಾಸಗಳನ್ನು ಕೆಳಗಿನಂತೆ ನೀಡಲಾಗಿದೆ.
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ 7892810864




