SBI Clerk Junior Associate Recruitment 2024 : ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್. ಭಾರತೀಯ ಸ್ಟೇಟ್ ಬ್ಯಾಂಕ್ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
ಭಾರತೀಯ ಸ್ಟೇಟ್ ಬ್ಯಾಂಕ್ ಕ್ಲೆರಿಕಲ್ ಕೇಡರ್ನ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ 2024ನೇ ಸಾಲಿನ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ವರ್ಷ 13,735 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಕ್ಲೆರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್).
ಹುದ್ದೆಗಳ ಸಂಖ್ಯೆ : 13,735.
ವೇತನ ಶ್ರೇಣಿ : ರೂ.17900 – 47920.
ವಿದ್ಯಾರ್ಹತೆ: ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ ಈ ರೀತಿ ಇದೆ:-
ದಿನಾಂಕ 01-04-2024 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
ಒಬಿಸಿ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Numerical Ability , Quantitative Aptitude
ii) Reasoning Ability
iii) General/ Financial Awareness
iv) General English
v) Computer Aptitude.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಮಂಗಳೂರು, ಬೆಂಗಳೂರು, ಬೆಳಗಾವಿ, ಗುಲ್ಬರ್ಗ, ಹುಬ್ಬಳ್ಳಿ-ಧಾರವಾಡ,
ಮೈಸೂರು, ಶಿವಮೊಗ್ಗ, ಉಡುಪಿ
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳು / EWS ಅಭ್ಯರ್ಥಿಗಳಿಗೆ ರೂ.750.
ii) ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07/01/2025.
ಪ್ರಿಲಿಮ್ಸ್ ಆನ್ಲೈನ್ ಪ್ರವೇಶ ಪರೀಕ್ಷೆಯ ಸಂಭಾವ್ಯ ದಿನಾಂಕವು ಫೆಬ್ರವರಿ 2025 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://sbi.co.in) ಅನ್ನು ಪರಿಶೀಲಿಸಿ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864