BHARAT ELECTRONICS LIMITED (A Govt. of India Enterprise under the Ministry of Defence) : ರಕ್ಷಣಾ ಸಚಿವಾಲಯದ ಅಡಿಯಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನವರತ್ನ ಪಿಎಸ್ಯು ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಯಾಗಿದ್ದು, ಮಿಲಿಟರಿ ಸಂವಹನ, ರಾಡಾರ್ಗಳು, ನೌಕಾ ವ್ಯವಸ್ಥೆಗಳು, C4I ವ್ಯವಸ್ಥೆಗಳು, ಶಸ್ತ್ರಾಸ್ತ್ರ ವ್ಯವಸ್ಥೆಗಳು, ಹೋಮ್ಲ್ಯಾಂಡ್ ಸೆಕ್ಯುರಿಟಿ, ಕಾರ್ಯತಂತ್ರದ ಸಂವಹನ ಮತ್ತು ಮಾನವರಹಿತ ವ್ಯವಸ್ಥೆಗಳು, ಎಲೆಕ್ಟ್ರಾನಿಕ್ ಯುದ್ಧ, ಟ್ಯಾಂಕ್ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರೋ ಆಪ್ಟಿಕ್ಸ್ ಕ್ಷೇತ್ರಗಳಲ್ಲಿ 350 ಕ್ಕೂ ಹೆಚ್ಚು ವಿಭಿನ್ನ ಉತ್ಪನ್ನಗಳ ಪೋರ್ಟ್ಫೋಲಿಯೊವನ್ನು ಹೊಂದಿದೆ. ಇದೀಗ ಬಿಇಎಲ್ ಭಾರತದಾದ್ಯಂತ ತನ್ನ ಘಟಕಗಳಲ್ಲಿ ನೇಮಕ ಮಾಡಲು ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಿದೆ. ಹುದ್ದೆಗಳ ವಿವರ, ಅರ್ಹತೆ, ಪರೀಕ್ಷೆ ದಿನಾಂಕ, ಇತರೆ ಡೀಟೇಲ್ಸ್ ಕೆಳಗಿನಂತೆ ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಪ್ರೊಬೇಷನರಿ ಇಂಜಿನಿಯರ್ (ಇಲೆಕ್ಟ್ರಾನಿಕ್ಸ್) ಇನ್ ಇ-II ಗ್ರೇಡ್ – 200
ವಿದ್ಯಾರ್ಹತೆ: ಇಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಷಯದಲ್ಲಿ ಬಿಇ, ಬಿ.ಟೆಕ್, ಬಿಎಸ್ಸಿ ಪದವಿ
ವೇತನ ಶ್ರೇಣಿ : Rs.40,000- 1,40,000 (ಇತರೆ ಭತ್ಯೆ ನೀಡಲಾಗುತ್ತದೆ)
ii) ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) ಇನ್ ಇ-II ಗ್ರೇಡ್ – 150
ವಿದ್ಯಾರ್ಹತೆ: ಮೆಕ್ಯಾನಿಕಲ್ ವಿಷಯದಲ್ಲಿ ಬಿಇ, ಬಿ.ಟೆಕ್, ಬಿಎಸ್ಸಿ ಪದವಿ ಪಡೆದಿರಬೇಕು.
ವೇತನ ಶ್ರೇಣಿ : Rs.40,000- 1,40,000 (ಇತರೆ ಭತ್ಯೆ ನೀಡಲಾಗುತ್ತದೆ).
ವಯೋಮಿತಿ ವಿವರ ಈ ರೀತಿ ಇದೆ:-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ದಿನಾಂಕ 01-01-2025 ಕ್ಕೆ 25 ವರ್ಷ ಮೀರಿರಬಾರದು. ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವಯಸ್ಸಿನ ಸಡಿಲಿಕೆ ಈ ಕೆಳಗಿನಂತಿದೆ ನೋಡಿ.
ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ/ ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರನ್ನು ಅರ್ಹತೆಯ ಆಧಾರದಲ್ಲಿ ಸಿಬಿಟಿ ಪರೀಕ್ಷೆಗೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-01-2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆನ್ಲೈನ್ ಡೈರೆಕ್ಟ್ ಲಿಂಕ್ ಅನ್ನು ಕೆಳಗಿನಂತೆ ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864