Central Board of Secondary Education (CBSE) : ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು- ಸಿಬಿಎಸ್ಇ, ಪದವಿ ಪಾಸಾದವರಿಗೆ ಸೂಪರಿಂಟೆಂಡೆಂಟ್ ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಜೂನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಇಂದ ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಪದವಿ ಪಾಸಾದವರಿಗೆ ಸೂಪರಿಂಟೆಂಡೆಂಟ್ ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಜೂನಿಯರ್ ಅಸಿಸ್ಟಂಟ್ ಹುದ್ದೆಗಳಿವೆ. ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಉದ್ಯೋಗದಲ್ಲಿ ಆಸಕ್ತಿ ಇರುವ ಹಾಗೂ ಅರ್ಹತೆ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಸೂಪರಿಂಟೆಂಡೆಂಟ್ – 142
ವಿದ್ಯಾರ್ಹತೆ : ಯಾವುದೇ ಪದವಿ.
ii) ಜೂನಿಯರ್ ಅಸಿಸ್ಟಂಟ್ – 70
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪಾಸಾಗಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ವಯಸ್ಸಿನ ಸಡಿಲಿಕೆ ಈ ಕೆಳಗಿನಂತಿದೆ ನೋಡಿ.
ಸೂಪರಿಂಟೆಂಡೆಂಟ್ ಹುದ್ದೆಗೆ ಅರ್ಜಿ ಹಾಕಲು ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ಜೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಹಾಕಲು ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಅನ್ವಯವಾಗಲಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-01-2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473