
AIRPORTS AUTHORITY OF INDIA: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ತಾಂತ್ರಿಕ, ತಾಂತ್ರಿಕೇತರ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವವರಿಗೆ ಏರ್ಪೋರ್ಟ್ ಅಥಾರಿಟಿಯು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವಾಯುಯಾನ ವಲಯದಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ AAI ನೇಮಕಾತಿ ಜೂನಿಯರ್ ಎಕ್ಸಿಕ್ಯೂಟಿವ್ ಒಂದು ಅಮೂಲ್ಯವಾದ ಅವಕಾಶವನ್ನು ಒದಗಿಸುತ್ತದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಜೂನಿಯರ್ ಎಕ್ಸಿಕ್ಯೂಟಿವ್ (Junior Executive)
ವೇತನ ಶ್ರೇಣಿ : Rs.36,000 – 1,40,000.
(ಮೂಲ ವೇತನದ ಜೊತೆಗೆ, ಆಯ್ಕೆಯಾದ ಅಭ್ಯರ್ಥಿಗಳು ತುಟ್ಟಿ ಭತ್ಯೆ, 35% ಭತ್ಯೆಗಳು, ಎಚ್ಆರ್ಎ ಮತ್ತು ಎಎಐ ನಿಯಮಗಳ ಪ್ರಕಾರ ಸಿಪಿಎಫ್, ಗ್ರಾಚ್ಯುಟಿ, ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ವೈದ್ಯಕೀಯ ಪ್ರಯೋಜನಗಳಂತಹ ಇತರ ಪ್ರಯೋಜನಗಳನ್ನು ಪಡೆಯುತ್ತಾರೆ.)
i) ಜೂನಿಯರ್ ಎಕ್ಸಿಕ್ಯೂಟಿವ್ – ಫೈಯರ್ ಸರ್ವೀಸ್.
ವಿದ್ಯಾರ್ಹತೆ: ಫೈಯರ್ ಇಂಜಿನಿಯರಿಂಗ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ / ಆಟೋಮೊಬೈಲ್ ಇಂಜಿನಿಯರಿಂಗ್ ಬಿಇ ಅಥವಾ ಬಿ.ಟೆಕ್ ಪಾಸ್.
ii) ಜೂನಿಯರ್ ಎಕ್ಸಿಕ್ಯೂಟಿವ್ – ಹ್ಯೂಮನ್ ರಿಸೋರ್ಸ್.
ವಿದ್ಯಾರ್ಹತೆ: ಪದವಿ / ಎಂಬಿಎ ಶಿಕ್ಷಣದ ಜತೆಗೆ ಹೆಚ್ಆರ್ಎಂ / ಹೆಚ್ಆರ್ಡಿ/ ಪಿಎಂ ಅಂಡ್ ಐಆರ್ / ಲೇಬರ್ ವೆಲ್ಫೇರ್ ವಿಷಯಗಳಲ್ಲಿ ತರಬೇತಿ ಅಥವಾ ಕೋರ್ಸ್ ಮಾಡಿರಬೇಕು.
iii) ಜೂನಿಯರ್ ಎಕ್ಸಿಕ್ಯೂಟಿವ್ – ಅಫೀಶಿಯಲ್ ಲಾಂಗ್ವೇಜ್.
ವಿದ್ಯಾರ್ಹತೆ: ಇಂಗ್ಲಿಷ್ / ಹಿಂದಿ ವಿಷಯಗಳಲ್ಲಿ ಪಿಜಿ ಪಾಸ್ ಮಾಡಿರಬೇಕು. ಅಥವಾ ಪದವಿ ಹಂತದಲ್ಲಿ ಈ ವಿಷಯಗಳನ್ನು ಕನಿಷ್ಟ ಎಲೆಕ್ಟಿವ್ ಆಗಿ ಓದಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ಎಸ್ಸಿ / ಎಸ್ಟಿ ವರ್ಗಗಳ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.
(ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಅರ್ಜಿ ಶುಲ್ಕ ವಿವರ:-
i) ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ ರೂ.1000.
ii) ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-03-2025
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



