Sirsi Urban Sahakari Bank : 1905 ರಲ್ಲಿ ಸ್ಥಾಪನೆಯಾದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್, 110 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯದ ಅಗ್ರ 10 ನಗರ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿದೆ. ಪ್ರಸ್ತುತ ಬ್ಯಾಂಕಿನ ಕಾರ್ಯಾಚರಣೆಯ ವ್ಯಾಪ್ತಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ವಿಸ್ತರಿಸಿದೆ. ಬ್ಯಾಂಕ್ 16 ಶಾಖೆಗಳನ್ನು ಮತ್ತು 2 ವಿಸ್ತರಣಾ ಕೌಂಟರ್ಗಳನ್ನು ಹೊಂದಿದೆ. ಫ್ರಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ವಿವಿಧ ಪದವೀಧರರಿಗೆ ಭರ್ಜರಿ ಜಾಬ್ ಆಫರ್ ನೀಡಿದೆ. ಫ್ರಂಟ್ ಡೆಸ್ಕ್ ಅಸೋಸಿಯೇಟ್ಗಳನ್ನು ನೇಮಕ ಮಾಡಲು, ಆಫ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಫ್ರಂಟ್ ಡೆಸ್ಕ್ ಅಸೋಸಿಯೇಟ್ (Front Desk Associate).
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
ವೇತನ ಶ್ರೇಣಿ : Rs.21400- 42000.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
ಭರ್ತಿ ಮಾಡಿದ ಅರ್ಜಿಗಳನ್ನು ಬ್ಯಾಂಕಿನ ಕೇಂದ್ರ ಕಛೇರಿಗೆ ದಿನಾಂಕ 08-04-2025ರ ಸಾಯಂಕಾಲ 5.00 ಗಂಟೆಯೊಳಗೆ ತಲುಪುವಂತೆ ಕಳುಹಿಸತಕ್ಕದ್ದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಗಮನಿಸಿ :
ಅರ್ಜಿ ನಮೂನೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ನಿಬಂಧನೆಗಳು ಮತ್ತು ಸೂಚನೆಗಳು ಇತ್ಯಾದಿ ವಿವರಗಳು ಬ್ಯಾಂಕಿನ ಅಧಿಕೃತ ಜಾಲತಾಣ www.sirsiurbanbank.in ದಲ್ಲಿ ಲಭ್ಯವಿರುತ್ತದೆ. ಸಂಪೂರ್ಣವಾಗಿ ಪರಿಶೀಲಿಸಿ ಮತ್ತೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆಫ್ಲೈನ್ ಅರ್ಜಿ ನಮೂನೆ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
Application Form – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473


