RECRUITMENT OF CONSTABLE/TRADESMENT IN CISF : ನೀವು ಎಸ್ಎಸ್ಎಲ್ಸಿ ಪಾಸಾಗಿದ್ದು, ಈಗಲೇ ಸರ್ಕಾರಿ ಉದ್ಯೋಗದ ಕನಸು ಕಂಡಿದ್ದಲ್ಲಿ, ಅದರಲ್ಲೂ ಕೇಂದ್ರ ಸರ್ಕಾರಿ ಸಂಬಳ ಪಡೆಯುವ ಆಸೆ ನಿಮಗಿದ್ದಲ್ಲಿ, ಇಲ್ಲಿದೆ ನೋಡಿ ಭರ್ಜರಿ ಜಾಬ್ ಆಫರ್. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 1161 ಕಾನ್ಸ್ಟೇಬಲ್ / ಟ್ರೇಡ್ಸ್ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ / ಟ್ರೇಡ್ಸ್ಮನ್ ಹುದ್ದೆಗಳ ನೇಮಕಾತಿ – 2025. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಕಾನ್ಸ್ಟೇಬಲ್ / ಟ್ರೇಡ್ಸ್ಮನ್ – 1161 ಹುದ್ದೆಗಳು.
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ.
ವೇತನ ಶ್ರೇಣಿ : ರೂ.21,700-69,100.
ವಯೋಮಿತಿ ವಿವರ ಈ ರೀತಿ ಇದೆ:-
ದಿನಾಂಕ 01-08-2025 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 23 ವರ್ಷ ವಯಸ್ಸು ಮೀರಿರಬಾರದು. (ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ಕೆಟಗರಿ – ನಾನ್ ಕ್ರಿಮಿಲೇಯರ್ ಅಭ್ಯರ್ಥಿಗಳಿಗೆ 3 ವರ್ಷ, ಮಾಜಿ ಸೈನಿಕರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ದೈಹಿಕ ಸಹಿಷ್ಣುತೆ ಪರೀಕ್ಷೆ (ಪಿಇಟಿ), ದೈಹಿಕ ಸಾಮರ್ಥ್ಯ ಪರೀಕ್ಷೆ (ಪಿಎಸ್ಟಿ), ಟ್ರೇಡ್ ಟೆಸ್ಟ್, ಮೂಲ ದಾಖಲೆಗಳ ಪರಿಶೀಲನೆ, ಒಎಂಆರ್ ಆಧಾರಿತ ಕಂಪ್ಯೂಟರ್ ಪರೀಕ್ಷೆ, ಮೆಡಿಕಲ್ ಟೆಸ್ಟ್ ನಡೆಸುವ ಮೂಲಕ ಮೆರಿಟ್ ಆಧಾರದಲ್ಲಿ, ಮೀಸಲಾತಿಗೆ ಅನುಗುಣವಾಗಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. (ಲಿಖಿತ ಪರೀಕ್ಷೆಯ ಭಾಷೆಗಳು – ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ಇರುತ್ತದೆ.)
ಅರ್ಜಿ ಶುಲ್ಕ ವಿವರ:-
ಅಪ್ಲಿಕೇಶನ್ ಶುಲ್ಕ ರೂ.100/-
ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-04-2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




