ಭಾರತೀಯ ರೈಲ್ವೇ ನೇಮಕಾತಿ 2025 : ಭಾರತೀಯ ರೈಲ್ವೇಯಲ್ಲಿ ಒಂದು ಹುದ್ದೆ ಪಡೆಯಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ, ನಿಮ್ಮ ಕನಸು ನನಸು ಮಾಡುವ ಸಮಯ ಬಂದಿದೆ. RRB NTPC ನೇಮಕಾತಿ 2025, ಚೀಫ್ ಕಾಮರ್ಷಿಯಲ್ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರಾಫಿಕ್ ಅಸಿಸ್ಟೆಂಟ್ ಸೇರಿದಂತೆ 5810 ಹುದ್ದೆಗಳಿಗೆ ಅರ್ಜಿ ಅಹ್ವಾನ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
CENTRALISED EMPLOYMENT NOTICE (CEN) No.06/2025
Recruitment for the various posts of Non-Technical Popular Categories (Graduate) : ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಚೀಫ್ ಕಾಮರ್ಷಿಯಲ್ ಟಿಕೆಟ್ ಸೂಪರ್ವೈಸರ್ – 161 ಹುದ್ದೆಗಳು
ii) ಸ್ಟೇಷನ್ ಮಾಸ್ಟರ್ – 615 ಹುದ್ದೆಗಳು
iii) ಗೂಡ್ಸ್ ಟ್ರೈನ್ ಮ್ಯಾನೇಜರ್ – 3416 ಹುದ್ದೆಗಳು
iv) ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ – 921 ಹುದ್ದೆಗಳು
v) ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 638 ಹುದ್ದೆಗಳು
vi) ಟ್ರಾಫಿಕ್ ಅಸಿಸ್ಟೆಂಟ್ – 59 ಹುದ್ದೆಗಳು
ವಿದ್ಯಾರ್ಹತೆ:
ಎಲ್ಲಾ ಹುದ್ದೆಗಳಿಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದ ಪದವಿ ಬೇಕು. ಅದು ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ ಯಾವುದಾದರೂ ಆಗಬಹುದು. ಸರಳವಾಗಿ ಹೇಳಬೇಕೆಂದರೆ, ನೀವು ಯಾವುದೇ ಸ್ಟ್ರೀಮ್ನಲ್ಲಿ ಪದವೀಧರರಾಗಿದ್ದರೆ ಸಾಕು. ಆದರೆ, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಸೀನಿಯರ್ ಕ್ಲರ್ಕ್ ಹುದ್ದೆಗಳಿಗೆ ಕಂಪ್ಯೂಟರ್ನಲ್ಲಿ ಇಂಗ್ಲಿಷ್ ಅಥವಾ ಹಿಂದಿ ಟೈಪಿಂಗ್ ಸಾಮರ್ಥ್ಯ ಕಡ್ಡಾಯ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ರೈಲ್ವೆ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅಭ್ಯರ್ಥಿಗಳು: ₹500 (CBT ಹಾಜರಾಗಿದರೆ ₹400 ಮರುಪಾವತಿ)
ii) SC/ST/PwBD/ಮಹಿಳಾ/EBC: ₹250 (CBT ಹಾಜರಾಗಿದರೆ ₹250 ಮರುಪಾವತಿ)

ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20 ನವೆಂಬರ್ 2025.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



