KSSIDC Recruitment 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೀಗ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿನ (KSSIDC Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಲ್ಯಾಣ ಕರ್ನಾಟಕ ವೃಂದದ ಮತ್ತು ಉಳಿಕೆ ಮೂಲ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
KEA Recruitment 2025 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ವ್ಯವಸ್ಥಾಪಕರು, ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ವ್ಯವಸ್ಥಾಪಕರು.
ವಿದ್ಯಾರ್ಹತೆ: ಕಲೆ/ ವಿಜ್ಞಾನ/ ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ.
ವೇತನ ಶ್ರೇಣಿ : ರೂ. 43,100/- ರೂ. 83,900/-
ii) ಸಹಾಯಕ ವ್ಯವಸ್ಥಾಪಕರು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ ಶ್ರೇಣಿ : ರೂ. 37,900/- ರೂ. 70,850/-
iii) ಹಿರಿಯ ಸಹಾಯಕರು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ ಶ್ರೇಣಿ : ರೂ. 30,350/- ರೂ. 58,250/-
iv) ಕಿರಿಯ ಸಹಾಯಕರು.
ವಿದ್ಯಾರ್ಹತೆ: ದ್ವಿತೀಯ ಪಿಯುಸಿ.
ವೇತನ ಶ್ರೇಣಿ : ರೂ. 21,400/- ರೂ. 42,000/-
v) ಸಹಾಯಕ ಕಾರ್ಯಪಾಲಕ ಅಭಿಯಂತರರು (ಸಿವಿಲ್).
ವಿದ್ಯಾರ್ಹತೆ: ಬಿಇ (ಸಿವಿಲ್)
ವೇತನ ಶ್ರೇಣಿ : ರೂ. 52,620/- ರೂ. 97,100/-
vi) ಸಹಾಯಕ ಅಭಿಯಂತರರು (ಸಿವಿಲ್).
ವಿದ್ಯಾರ್ಹತೆ: ಬಿಇ ಡಿಗ್ರಿ ಇನ್ ಸಿವಿಲ್ ಇಂಜಿನಿಯರಿಂಗ್.
ವೇತನ ಶ್ರೇಣಿ : ರೂ. 43,100/- ರೂ. 83,900/-
vii) ಸಹಾಯಕ ಅಭಿಯಂತರರು (ವಿದ್ಯುತ್).
ವಿದ್ಯಾರ್ಹತೆ: ಬಿಇ ಡಿಗ್ರಿ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.
ವೇತನ ಶ್ರೇಣಿ : ರೂ. 43,100/- ರೂ. 83,900/-
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 41 ವರ್ಷ.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
ii) ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳು – ರೂ. 500
iii) ವಿಶೇಷ ಚೇತನ ಅಭ್ಯರ್ಥಿಗಳು – ರೂ. 250.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 14, 2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





