DCC ಬ್ಯಾಂಕ್ ನೇಮಕಾತಿ 2026 | ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ 10 ನೇ ತರಗತಿ, ಪಿಯುಸಿ, ಪದವಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
DCC Bank Recruitment 2026: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ (BDCCB), ಹೊಸಪೇಟೆ ವತಿಯಿಂದ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರವಾದ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಮತ್ತು ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ಲೇಖನದಲ್ಲಿ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಆಯ್ಕೆ ಪ್ರಕ್ರಿಯೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಗಿದೆ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ: ಈ ನೇಮಕಾತಿಯು ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಮತ್ತು ಕಿರಿಯ ಸೇವಕರಂತಹ ವಿವಿಧ ಸ್ತರದ ಹುದ್ದೆಗಳನ್ನು ಒಳಗೊಂಡಿದ್ದು, ಆಕರ್ಷಕ ವೇತನ ಶ್ರೇಣಿಯನ್ನು ಹೊಂದಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯನ್ನು ಹೊಂದಿರಬೇಕು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
I) ವ್ಯವಸ್ಥಾಪಕರು / ಪ್ರಥಮ ದರ್ಜೆ ಸಹಾಯಕರು
ವಿದ್ಯಾರ್ಹತೆ: ಪದವಿಯಲ್ಲಿ (Any Degree)
II) ದ್ವಿತೀಯ ದರ್ಜೆ ಸಹಾಯಕರು
ವಿದ್ಯಾರ್ಹತೆ: ದ್ವಿತೀಯ ಪಿಯುಸಿ (12th Standard)
III) ವಾಹನ ಚಾಲಕರು
ವಿದ್ಯಾರ್ಹತೆ: ಎಸ್ಎಸ್ಎಲ್ಸಿ & Driving License
IV) ಕಿರಿಯ ಸೇವಕರು
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ.
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ಈ ಕೆಳಗಿನ ಶ್ರೇಣಿಯಲ್ಲಿ ನೀಡಲಾಗುತ್ತದೆ:
I) ವ್ಯವಸ್ಥಾಪಕರು / ಪ್ರಥಮ ದರ್ಜೆ ಸಹಾಯಕರು: 44425 ರಿಂದ 83700 ರೂಪಾಯಿಗಳು.
II) ದ್ವಿತೀಯ ದರ್ಜೆ ಸಹಾಯಕರು: 34100 ರಿಂದ 67600 ರೂಪಾಯಿಗಳು.
III) ವಾಹನ ಚಾಲಕರು: 31775 ರಿಂದ 61300 ರೂಪಾಯಿಗಳು.
IV) ಕಿರಿಯ ಸೇವಕರು: 29600 ರಿಂದ 52800 ರೂಪಾಯಿಗಳು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳಾದ 2A, 2B, 3A, 3B ಅಭ್ಯರ್ಥಿಗಳಿಗೆ: 1,000 ರೂಪಾಯಿಗಳು.
ii) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 500 ರೂಪಾಯಿಗಳು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.05.2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





