JOB NEWS | 10ನೇ ತರಗತಿ, ಪಿಯುಸಿ, ಡಿಪ್ಲೊಮಾ ಆದವರಿಗೆ ನಗರ ಸಿವಿಲ್ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ | ವೇತನ : ರೂ. 27,000 – 83,700 | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಚಾಲಕ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಎಲ್ಲ ರೀತಿಯ ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿಗಾಗಿ Vritti News ವಾಟ್ಸಪ್ಪ್ ಗ್ರೂಪಿಗೆ ಜಾಯಿನ್ ಆಗಿ👇
ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದ ಶೀಘ್ರಲಿಪಿಕಾರರು ಗೇಡ್-III, ಬೆರಳಚ್ಚುಗಾರು, ಆದೇಶ ಜಾರಿಕಾರ, ಚಾಲಕರು & ಜವಾನ ಹುದ್ದೆಗಳ ನೇಮಕಾತಿ ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಶೀಘ್ರಲಿಪಿಗಾರರು ಗ್ರೇಡ್ 3,
ii) ಬೆರಳಚ್ಚುಗಾರರು,
iii) ಚಾಲಕ,
iv) ಆದೇಶ ಜಾರಿಕಾರ,
v) ಜವಾನ.
ಶೈಕ್ಷಣಿಕ ಅರ್ಹತೆ :
i) ಶೀಘ್ರಲಿಪಿಗಾರರು ಗ್ರೇಡ್ 3
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ii) ಬೆರಳಚ್ಚುಗಾರರು –
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
iii) ಚಾಲಕ –
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಮತ್ತು ಅಥವಾ ತತ್ಸಮಾನ ವಿದ್ಯಾರ್ಹತೆ
ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
iv) ಆದೇಶ ಜಾರಿಕಾರ –
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ವಾಹನ ಚಾಲನಾ ಪರವಾನಿಗೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
v) ಜವಾನ –
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ಕನ್ನಡ ಓದಲು, ಬರೆಯಲು ಬರಬೇಕು.
ವೇತನ :
i) ಶೀಘ್ರಲಿಪಿಗಾರರು ಗ್ರೇಡ್ 3 ರೂ. 44,425 – ರೂ. 83,700
ii) ಬೆರಳಚ್ಚುಗಾರರು ರೂ. 34,100 – ರೂ. 67,600
iii) ಚಾಲಕ ರೂ. 34,100 – ರೂ. 67,600
iv) ಆದೇಶ ಜಾರಿಕಾರ ರೂ. 31,775 – ರೂ. 61,300
v) ಜವಾನ ರೂ. 27,000 – ರೂ. 46,675.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
ಪ.ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
i) ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಗಳು ಅರ್ಹತಾ ಶೈಕ್ಷಣಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಪ್ರಾಧಿಕಾರವು ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಒಟ್ಟು ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ii) ಚಾಲಕರು ಹುದ್ದೆಗೆ ಅರ್ಹತಾ ಪರೀಕ್ಷೆ ನಡೆಸಿ, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
iii) ಆದೇಶ ಜಾರಿಕಾರ, ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
ii) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
iii) ಪ.ಜಾತಿ, ಪ.ಪಂ, ಪ್ರ1, ಎದ್ದುಕಾಣುವ ಅಂಗವೈಕಲ್ಯವುಳ್ಳ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜುಲೈ 30, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



