VAO ನೇಮಕಾತಿ 2026: ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2026: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ (Village Administrative Officer – VAO) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸ್ವೀಕಾರ ದಿನಾಂಕಗಳು, ಶುಲ್ಕ, ಅರ್ಹತೆ, ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.




ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA : ರಾಜ್ಯದ ಸರ್ಕಾರಿ ಉದ್ಯೋಗದ (Government Job) ಕನಸು ಕಾಣುತ್ತಿರುವ ಸಾವಿರಾರು ಯುವಕ ಯುವತಿಯರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಭರ್ಜರಿ 572 ಗ್ರಾಮ ಆಡಳಿತ ಅಧಿಕಾರಿಗಳ (Village Administrative Officer – VAO) ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿ (Village Accountant) ಹುದ್ದೆಗೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಸಂಪರ್ಕಿಸಿ:-
IRCMD Education Center
Puttur
Ph: 9945988118
ಅರ್ಹತೆ ಮತ್ತು ವಯೋಮಿತಿ:
18 ರಿಂದ 40-45 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರೊಂದಿಗೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯಸ್ಸು ನಿಗದಿ ಮಾಡಲಾಗಿದೆ. ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್ ಸಿ ಎಸ್ ಟಿ ವರ್ಗದವರಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಮೀಸಲಾತಿ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಅರ್ಜಿ ಶುಲ್ಕ:
i) ಸಾಮಾನ್ಯ ಮತ್ತು ಒಬಿಸಿ ವರ್ಗದ (ಪ್ರವರ್ಗ – 2ಎ 2ಬಿ 3ಎ 3ಬಿ) ಅಭ್ಯರ್ಥಿಗಳಿಗೆ 750 ರೂಪಾಯಿ ಶುಲ್ಕ
ii) ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಒಬಿಸಿ ವರ್ಗದ (ಪ್ರವರ್ಗ 1) ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ
iii) ಅಂಗವಿಕಲ ಅಭ್ಯರ್ಥಿಗಳಿಗೆ 250 ರೂಪಾಯಿ ಶುಲ್ಕ.
ವೇತನ:
ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹34,100-₹67,600ವರೆಗೆ ವೇತನ ಶ್ರೇಣಿ ದೊರೆಯಲಿದೆ. ಇದರಲ್ಲಿ ಮೂಲ ವೇತನದ ಜೊತೆಗೆ ಸರ್ಕಾರಿ ನಿಯಮಗಳ ಪ್ರಕಾರ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ಇತರ ಸೌಲಭ್ಯಗಳು ದೊರೆಯುತ್ತವೆ. ಅದರಲ್ಲೂ, ಇದು ರಾಜ್ಯ ಸರ್ಕಾರದ ಗ್ರೂಪ್ ಸಿ ವೃಂದದ ಖಾಯಂ ಹುದ್ದೆಯಾಗಿರುವುದರಿಂದ ಉದ್ಯೋಗ ಭದ್ರತೆ ಇದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 30 2026.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





