ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಗಣೇಶ್ ಇವರಿಂದ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕಾರ್ಯಗಾರ – ವೃತ್ತಿ ನ್ಯೂಸ್
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಅಂತಿಮ ಪದವಿ ವಿದ್ಯಾರ್ಥಿನಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಮಾಥ್ಸ್ ಶಾರ್ಟ್ಕಟ್ ಟ್ರಿಕ್ಸ್ ಮತ್ತು ಟಿಪ್ಸ್ ಕುರಿತು ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಕಾರ್ಯಾಗಾರ ದಿನಾಂಕ 06-08-2026ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯ ಸಿಇಓ ಶ್ರೀಮತಿ ಪ್ರಫುಲ್ಲ ಗಣೇಶ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಗಣಿತ ಶಾರ್ಟ್ಕಟ್ ತಂತ್ರಗಳು ಮತ್ತು ಟಿಪ್ಸ್ ಕುರಿತು ತರಬೇತಿ ನೀಡಿದರು.ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ನಂದ ಕಿಶೋರ್ ಎಸ್ ಇವರು ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರು ಪ್ರೊ. ಪದ್ಮನಾಭ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎವರೆಸ್ಟ್ ರೊಡ್ರಿಗಸ್ ತರಬೇತಿ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.






ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ನಂದ ಕಿಶೋರ್ ಎಸ್ ಇವರು ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರು ಪ್ರೊ. ಪದ್ಮನಾಭ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎವರೆಸ್ಟ್ ರೊಡ್ರಿಗಸ್ ತರಬೇತಿ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

