15,000 ಶಿಕ್ಷಕರ ಬೃಹತ್ ನೇಮಕಾತಿ | ಕರ್ನಾಟಕ ಶಿಕ್ಷಣ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Karnataka Teacher Recruitment 2026: ಸರ್ಕಾರಿ ಶಾಲಾ ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಶಾಲಾ ಶಿಕ್ಷಣಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ 15000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಚಾಲನೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬಹುನಿರೀಕ್ಷಿತ Karnataka Teacher Recruitment 2026 ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟು 15,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಆಗಸ್ಟ್ 18, 2026 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿನ 15,000 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಜಿಲ್ಲಾವಾರು ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಸಾಮಾನ್ಯ, ಕಂಪ್ಯೂಟರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಸೇರಿವೆ. ಕಲ್ಯಾಣ ಕರ್ನಾಟಕಕ್ಕೆ 6,967 ಹುದ್ದೆಗಳು ಮೀಸಲಾಗಿದ್ದು, ಉಳಿಕೆ ಮೂಲ ವೃಂದಕ್ಕೆ 8,033 ಹುದ್ದೆಗಳಿವೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ನೇಮಕಾತಿ ಇಲಾಖೆ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ
ಪ್ರಾಥಮಿಕ ಶಾಲಾ ಶಿಕ್ಷಕರು (PST),
ಪದವೀಧರ ಪ್ರಾಥಮಿಕ ಶಿಕ್ಷಕರು (GPT),
ಪ್ರೌಢಶಾಲಾ ಸಹ ಶಿಕ್ಷಕರು (HSTR),
ಕಂಪ್ಯೂಟರ್ ಸೈನ್ಸ್ (CST)
ದೈಹಿಕ ಶಿಕ್ಷಣ ಶಿಕ್ಷಕರು (PET)
ಒಟ್ಟು ಹುದ್ದೆಗಳು: 15,000
Post-wise Vacancies:
i) ಪದವೀಧರ ಪ್ರಾಥಮಿಕ ಶಿಕ್ಷಕರು (Graduate Primary Teacher – GPT/GPSTR 6 to 8): 8,500 ಹುದ್ದೆಗಳು
(ಕಲ್ಯಾಣ ಕರ್ನಾಟಕ: 3,228 | ಮಿಕ್ಕುಳಿದ ವೃಂದ: 5,272)
ii) ಪ್ರೌಢಶಾಲಾ ಸಹ ಶಿಕ್ಷಕರು (Assistant Master – High School 9 & 10): 4,500 ಹುದ್ದೆಗಳು
(ಕಲ್ಯಾಣ ಕರ್ನಾಟಕ: 2,214 | ಮಿಕ್ಕುಳಿದ ವೃಂದ: 2,286)
iii) ಸಾಮಾನ್ಯ ಪ್ರಾಥಮಿಕ ಶಾಲಾ ಶಿಕ್ಷಕರು (Primary School Teacher – PST 1 to 5): 900 ಹುದ್ದೆಗಳು
(ಕಲ್ಯಾಣ ಕರ್ನಾಟಕ: 800 | ಮಿಕ್ಕುಳಿದ ವೃಂದ: 100)
iv) ದೈಹಿಕ ಶಿಕ್ಷಣ ಶಿಕ್ಷಕರು (Physical Education Teacher – PET Grade 1 & 2): 600 ಹುದ್ದೆಗಳು
(ಕಲ್ಯಾಣ ಕರ್ನಾಟಕ: 425 | ಮಿಕ್ಕುಳಿದ ವೃಂದ: 175)
v) ಗಣಕಯಂತ್ರ ವಿಜ್ಞಾನ ಶಿಕ್ಷಕರು (Computer Science Teacher – CST): 500 ಹುದ್ದೆಗಳು
(ಕಲ್ಯಾಣ ಕರ್ನಾಟಕ: 300 | ಮಿಕ್ಕುಳಿದ ವೃಂದ: 200)
ಗರಿಷ್ಠ ವಯೋಮಿತಿ (Maximum Age Limit):
i) ಸಾಮಾನ್ಯ ವರ್ಗ (General Merit – GM): ಗರಿಷ್ಠ 40 ವರ್ಷಗಳು
ii) ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು
iii) ಪರಿಶಿಷ್ಟ ಜಾತಿ (SC) / ಪರಿಶಿಷ್ಟ ಪಂಗಡ (ST) / ಪ್ರವರ್ಗ-1: ಗರಿಷ್ಠ 45 ವರ್ಷಗಳು
iv) ವಿಕಲಚೇತನ (PwD) ಮತ್ತು ಮಾಜಿ ಸೈನಿಕ (Ex-Servicemen) ಅಭ್ಯರ್ಥಿಗಳಿಗೆ: ಸರ್ಕಾರಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ (ಗರಿಷ್ಠ 45 ವರ್ಷಗಳವರೆಗೆ).
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ (Selection Process)
ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ಪಾರದರ್ಶಕವಾಗಿ ಸ್ಪರ್ಧಾತ್ಮಕ ಪರೀಕ್ಷೆ (Competitive Exam) ಮತ್ತು ಮೆರಿಟ್ ಅಂಕಗಳ ಆಧಾರದ ಮೇಲೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆಯ ಹಂತಗಳು:
i) ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ (Written Competitive Examination)
ii) ಅಂಕಗಳ ಮೆರಿಟ್ ಲೆಕ್ಕಾಚಾರ (Degree 50% + TET 20% + Exam 30%)
iii) 1:1 ಪ್ರಕಟಿತ ಪರಿಶೀಲನಾ ಪಟ್ಟಿ (1:1 Verification List)
iv) ಮೂಲ ದಾಖಲಾತಿಗಳ ಪರಿಶೀಲನೆ (Document Verification)
v) ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ (Final Merit Selection List).
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-09-2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
APPLY ONLINE – ಕ್ಲಿಕ್ ಮಾಡಿ.
https://schooleducation.karnataka.gov.in/#.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



