ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ -2026 | ಕಿರಿಯ ವ್ಯವಸ್ಥಾಪಕ, ಸಹಾಯಕ, ಅಟೆಂಡರ್, ವಾಹನ ಚಾಲಕ, ಸಿಪಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Co-operative Bank Recruitment -2026 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತವು ಪ್ರಸ್ತುತ ಖಾಲಿ ಇರುವ ವಿವಿಧ ದರ್ಜೆಯ ಒಟ್ಟು 60 ಹುದ್ದೆಗಳ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೂ ಉದ್ಯೋಗ ಕಂಡುಕೊಳ್ಳಲು ಉತ್ತಮ ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Shri Shiddeshwar Cooperative Bank Recruitment 2026 : ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇದರಲ್ಲಿ ಖಾಲಿ ಇರುವ ಕಿರಿಯ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಿರಿಯ ವ್ಯವಸ್ಥಾಪಕರು (Junior Manager): 06 ಹುದ್ದೆಗಳು
ii) ಹಿರಿಯ ಸಹಾಯಕರು (Senior Assistant): 10 ಹುದ್ದೆಗಳು
iii) ಕಿರಿಯ ಸಹಾಯಕರು (Junior Assistant): 15 ಹುದ್ದೆಗಳು
iv) ಅಟೆಂಡರ್ (Attender): 03 ಹುದ್ದೆಗಳು
v) ವಾಹನ ಚಾಲಕ (Driver): 01 ಹುದ್ದೆಗಳು
vi) ಸಿಪಾಯಿ (Peon) : 19 ಹುದ್ದೆಗಳು
vii) ರಾತ್ರಿ ಕಾವಲುಗಾರ (Night Watchman): 06 ಹುದ್ದೆಗಳು.
ವೇತನ ಶ್ರೇಣಿ:
i) ಕಿರಿಯ ವ್ಯವಸ್ಥಾಪಕರು (Junior Manager): ₹22,800 – ₹43,200
ii) ಹಿರಿಯ ಸಹಾಯಕರು (Senior Assistant): ₹21,600 – ₹40,050
iii) ಕಿರಿಯ ಸಹಾಯಕರು (Junior Assistant): ₹20,000 – ₹36,300
iv) ಅಟೆಂಡರ್ (Attender): ₹14,550 – ₹26,700
v) ವಾಹನ ಚಾಲಕ (Driver): ₹14,550 – ₹26,700
vi) ಸಿಪಾಯಿ (Peon) : ₹14,550 – ₹26,700
vii) ರಾತ್ರಿ ಕಾವಲುಗಾರ (Night Watchman): ₹14,550 – ₹26,700.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
i) ಕಿರಿಯ ವ್ಯವಸ್ಥಾಪಕರು, ಹಿರಿಯ/ಕಿರಿಯ ಸಹಾಯಕ ಹುದ್ದೆಗಳಿಗೆ:ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಲಿಖಿತ ಪರೀಕ್ಷೆಗೆ (Written Exam – 200 ಅಂಕಗಳು) ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ.
ii) ಸಿಪಾಯಿ, ಅಟೆಂಡರ್, ಚಾಲಕ ಹಾಗೂ ವಾಹನ ಚಾಲಕ ಹುದ್ದೆಗಳಿಗೆ: ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಆಧಾರದಲ್ಲಿ 1:5 ರ ಅನುಪಾತದಲ್ಲಿ ನೇರ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. (ವಾಹನ ಚಾಲಕರಿಗೆ ಪ್ರಾವಿಣ್ಯತೆ ಪರೀಕ್ಷೆ ಇರುತ್ತದೆ).
ಬ್ಯಾಂಕಿಂಗ್/ಕೋ-ಆಪರೇಟಿವ್ ಬ್ಯಾಂಕ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಹಾಗೂ OBC (2A, 2B, 3A, 3B) ಅಭ್ಯರ್ಥಿಗಳಿಗೆ: ₹1,200/-
ii) SC / ST / ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹600/-.
ಶೈಕ್ಷಣಿಕ ಅರ್ಹತೆ (Educational Qualification):
i) ಹಿರಿಯ ಸಹಾಯಕರು & ಕಿರಿಯ ಸಹಾಯಕರು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಪರಿಜ್ಞಾನ ಹೊಂದಿರಬೇಕು.
ಅಂಕಗಳ ಕನಿಷ್ಠ ಶೇಕಡಾವಾರು: ಸಾಮಾನ್ಯ/ಇತರ ವರ್ಗದ ಅಭ್ಯರ್ಥಿಗಳು ಕನಿಷ್ಠ %60 ಅಂಕ ಹಾಗೂ SC/ST/ಪ್ರವರ್ಗ-1/ಮಾಜಿ ಸೈನಿಕರು ಕನಿಷ್ಠ %45 ಅಂಕ ಪಡೆದಿರಬೇಕು.
ii) ಕಿರಿಯ ವ್ಯವಸ್ಥಾಪಕರು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಪಡೆದಿರಬೇಕು, ಕಂಪ್ಯೂಟರ್ ಜ್ಞಾನ ಕಡ್ಡಾಯ ಹಾಗೂ ಕನಿಷ್ಠ 3 ವರ್ಷ ಬ್ಯಾಂಕಿಂಗ್/ಹಣಕಾಸು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
iii) ಅಟೆಂಡರ್, ಸಿಪಾಯಿ & ರಾತ್ರಿ ಕಾವಲುಗಾರ:
ಕರ್ನಾಟಕ ಬೋರ್ಡ್/CBSE ಯಿಂದ ಎಸ್ಎಸ್ಎಲ್ಸಿ (SSLC / 10th) ಉತ್ತೀರ್ಣರಾಗಿರಬೇಕು.
iv) ವಾಹನ ಚಾಲಕ:
SSLC ಉತ್ತೀರ್ಣರಾಗಿರಬೇಕು ಹಾಗೂ ಚಾಲ್ತಿಯಲ್ಲಿರುವ LMV ಚಾಲನಾ ಪರವಾನಗಿ (Driving License) ಹೊಂದಿರಬೇಕು.
(ಗಮನಿಸಿ: ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರಿಜ್ಞಾನ ಕಡ್ಡಾಯವಾಗಿರುತ್ತದೆ).
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15 ಸೆಪ್ಟೆಂಬರ್ 2026 (ಸಂಜೆ 5:30).
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





