ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2026 | ಹತ್ತನೇ ತರಗತಿ ಪಾಸಾಗಿದ್ರೆ ಸಾಕು | ವೇತನ ಶ್ರೇಣಿ: ₹34,100-₹67,600ರ ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Kodagu District Court Recruitment 2026 : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಚಾಲಕರು, ಆದೇಶಿಕ ಜಾರಿಕಾರರು ಹಾಗೂ ಜವಾನ/ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2026: ಅರ್ಹತೆ, ವೇತನ, ಅರ್ಜಿ ವಿಧಾನ ಇಲ್ಲಿದೆ. ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಬೆರಳಚ್ಚುಗಾರರು
ii) ಚಾಲಕರು
iii) ಆದೇಶಿಕ ಜಾರಿಕಾರರು
iv) ಜವಾನ/ಸೇವಕ.
ವೇತನ ಶ್ರೇಣಿ:
i) ಬೆರಳಚ್ಚುಗಾರರು ರೂ. 34,100 – ರೂ. 67,600
ii) ಚಾಲಕರು ರೂ. 34,100 – ರೂ. 67,600
iii) ಆದೇಶಿಕ ಜಾರಿಕಾರರು ರೂ. 31,775 – ರೂ. 61,300
iv) ಜವಾನ/ಸೇವಕ ರೂ. 27,000 – ರೂ. 46,675.
ಶೈಕ್ಷಣಿಕ ಅರ್ಹತೆ (Educational Qualification):
i) ಸೇವಕರು:
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
ii) ಆದೇಶಿಕ ಜಾರಿಕಾರರು:
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಭಾರಿ/ ಹಗುರ ವಾಹನ ಚಾಲನಾ ಪರವಾನಗಿಯನ್ನು ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
iii) ಚಾಲಕರು:
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
iv) ಬೆರಳಚ್ಚುಗಾರರು:
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅಭ್ಯರ್ಥಿಗಳ ಆಯ್ಕೆಯನ್ನು ಹುದ್ದೆಗೆ ತಕ್ಕಂತೆ ಕಂಪ್ಯೂಟರ್ ಟೈಪಿಂಗ್ ಕೌಶಲ್ಯ ಪರೀಕ್ಷೆ (Computer Typewriting Skill Test), ಚಾಲನಾ ಪರೀಕ್ಷೆ (Driving Test) ಮತ್ತು ನೆರವು ಇಂಟರ್ವ್ಯೂ (Interview) ಆಧಾರದ ಮೇಲೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ. ಬಳಿಕ ಅಗತ್ಯ ಶೈಕ್ಷಣಿಕ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿದ ನಂತರ, ಅರ್ಜಿಯನ್ನು ಸಬ್ಮಿಟ್ ಮಾಡಿ ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು (Application Number) ಕಾಯ್ದಿರಿಸಿಕೊಳ್ಳಿ.
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅಭ್ಯರ್ಥಿಗಳು – ರೂ. 300
ii) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
iii) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
ವಯೋಮಿತಿ (Age Limit):
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ವಿವರ:
ಸಾಮಾನ್ಯ ವರ್ಗ (Unreserved): 40 ವರ್ಷಗಳು
ಪ್ರವರ್ಗ 2A, 2B, 3A, 3B: 43 ವರ್ಷಗಳು
SC / ST / ಪ್ರವರ್ಗ-1: 45 ವರ್ಷಗಳು
(ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುತ್ತದೆ).
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 03, 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




