ಕೋ-ಆಪರೇಟಿವ್ ಬ್ಯಾಂಕ್ ನೇರ ನೇಮಕಾತಿ | ಕಿರಿಯ ಸಹಾಯಕರು, ಸಿಪಾಯಿ/ಕಾವಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ | ವೇತನಶ್ರೇಣಿ ₹44425 – ₹83700ರ ವರೆಗೆ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Co-operative Bank Recruitment -2026 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಉತ್ತಮ ಅವಕಾಶಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತವು ಪ್ರಸ್ತುತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ವಿಜಯಪುರ ನೇಮಕಾತಿ 2026 | SNS Bank Vijayapura Recruitment 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಿರಿಯ ಸಹಾಯಕರು
ii) ಸಿಪಾಯಿ/ಕಾವಲುಗಾರ
ವೇತನ ಶ್ರೇಣಿ:
i) ಕಿರಿಯ ಸಹಾಯಕರು: ರೂ. 44425 – 1125 – 47800 – 1250 – 52800 – 1375 – 58300 – 1500 – 64300 – 1650 – 74200 – 1900 – 83700
ii) ಸಿಪಾಯಿ/ಕಾವಲುಗಾರ: ರೂ. 27000 – 650 – 29600 – 725 – 32500 – 800 – 35700 – 900 – 39300 – 1000 – 43300 – 1125 – 46675.
ಶೈಕ್ಷಣಿಕ ಅರ್ಹತೆ (Educational Qualification):
i) ಕಿರಿಯ ಸಹಾಯಕರು: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪನೆಯಾದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯಲ್ಲಿ ಸರಾಸರಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ ಜ್ಞಾನ ಹೊಂದಿರಬೇಕು. ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಓದಲು, ಬರೆಯಲು, ಮಾತನಾಡಲು ಹಾಗೂ ಗ್ರಹಿಸಲು ಸಮರ್ಥರಾಗಿರಬೇಕು.
ii) ಸಿಪಾಯಿ/ಕಾವಲುಗಾರ: ಎಸ್.ಎಸ್.ಎಲ್.ಸಿ (10th) ಪರೀಕ್ಷೆಯಲ್ಲಿ ಸರಾಸರಿ ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಅಭ್ಯಾಸ ಮಾಡಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
i) ಕಿರಿಯ ಸಹಾಯಕರು ಹುದ್ದೆಗೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ಆಯ್ಕೆ ನಡೆಯಲಿದೆ.
ii) ಸಿಪಾಯಿ/ಕಾವಲುಗಾರ ಹುದ್ದೆಗೆ: ನಿಗದಿತ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡಾ 85% ಕ್ಕೆ ಇಳಿಸಿ, ಅರ್ಹತಾ ಪಟ್ಟಿಯಂತೆ 1:5 ಅನುಪಾತದಲ್ಲಿ 15 ಅಂಕಗಳ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
ಬ್ಯಾಂಕಿಂಗ್/ಕೋ-ಆಪರೇಟಿವ್ ಬ್ಯಾಂಕ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ಅರ್ಜಿ ಶುಲ್ಕ ವಿವರ:-
i) ಕಿರಿಯ ಸಹಾಯಕರು ಹುದ್ದೆಗೆ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 1200/- ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 600/-
ii) ಸಿಪಾಯಿ/ಕಾವಲುಗಾರ ಹುದ್ದೆಗೆ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 600/- ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 400/-.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28/09/2026 (ಸಂಜೆ 5:30 ರವರೆಗೆ)
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




