JOB NEWS | ತಿಂಗಳಿಗೆ 1 ಲಕ್ಷಕ್ಕೂ ಅಧಿಕ ಸಂಬಳ: UIIC ಯಲ್ಲಿ ಆಡಳಿತಾಧಿಕಾರಿ (AO) ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
United India Insurance Company : ಕೇಂದ್ರ ಸರ್ಕಾರದ ಒಡೆತನದ ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾದ ಯುನೆಡೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (UIIC) ನಿರುದ್ಯೋಗಿ ಮತ್ತು ಅರ್ಹ ಯುವಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಆಡಳಿತಾಧಿಕಾರಿ (AO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ ತಿಂಗಳಿಗೆ 82,485 ರಿಂದ 1,56,745ರೂ. ಈ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
RECRUITMENT OF ADMINISTRATIVE OFFICERS (SCALE I) – GENERALISTS & HINDI OFFICERS : ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (UIIC) ಆಡಳಿತ ಅಧಿಕಾರಿ (ಸ್ಕೇಲ್ I) ಹುದ್ದೆಗಳಿಗೆ UIIC AO ನೇಮಕಾತಿ 2026 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಆಡಳಿತಾಧಿಕಾರಿ – ಜನರಲಿಸ್ಟ್ (Generalists): 200 ಹುದ್ದೆಗಳು.
ii) ಆಡಳಿತಾಧಿಕಾರಿ – ಹಿಂದಿ ಅಧಿಕಾರಿ (Hindi Officers): 25 ಹುದ್ದೆಗಳು.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳನ್ನು ಆಡಳಿತ ಅಧಿಕಾರಿ (ಸ್ಕೇಲ್ I) ಆಗಿ ನೇಮಿಸಲಾಗುತ್ತದೆ. ನಿಗದಿತ ವೇತನ ಶ್ರೇಣಿಯ ಅಡಿಯಲ್ಲಿ ಮೂಲ ವೇತನವು ₹82,485 ರಿಂದ ಪ್ರಾರಂಭವಾಗುತ್ತದೆ. ಮಹಾನಗರ ಕೇಂದ್ರಗಳಲ್ಲಿ ಅಂದಾಜು ಒಟ್ಟು ಮಾಸಿಕ ವೇತನ ₹1,10,000. UIIC ನಿಯಮಗಳ ಪ್ರಕಾರ ಉದ್ಯೋಗಿಗಳು ಅನ್ವಯವಾಗುವ ಭತ್ಯೆಗಳು ಮತ್ತು ಸವಲತ್ತುಗಳಿಗೆ ಅರ್ಹರಾಗಿರುತ್ತಾರೆ.
ಶೈಕ್ಷಣಿಕ ಅರ್ಹತೆ (Educational Qualification):
i) ಜನರಲಿಸ್ಟ್ ಹುದ್ದೆಗಳಿಗೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ (Degree) ಅಥವಾ ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ. 60ರಷ್ಟು ಅಂಕಗಳೊಂದಿಗೆ (SC/ST/PwBD ಅಭ್ಯರ್ಥಿಗಳಿಗೆ ಶೇ. 55) ಪೂರ್ಣಗೊಳಿಸಿರಬೇಕು.
ii) ಹಿಂದಿ ಅಧಿಕಾರಿ ಹುದ್ದೆಗಳಿಗೆ: ಹಿಂದಿ ಅಥವಾ ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು (Master’s Degree) ಕನಿಷ್ಠ ಶೇ. 60ರಷ್ಟು ಅಂಕಗಳೊಂದಿಗೆ (SC/ST/PwBD ಗೆ ಶೇ. 55) ಪಡೆದಿರಬೇಕು (ಇತರೆ ಪರ್ಯಾಯ ಅರ್ಹತೆಗಳಿಗಾಗಿ ಅಧಿಸೂಚನೆ ಗಮನಿಸಿ).
iii) ಕಂಪ್ಯೂಟರ್ ಜ್ಞಾನ: ಅಭ್ಯರ್ಥಿಗಳಿಗೆ ಕಂಪ್ಯೂಟರ್ ಕಾರ್ಯನಿರ್ವಹಣೆಯ ಜ್ಞಾನ (Working knowledge of Computer) ಕಡ್ಡಾಯವಾಗಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಅಧಾರದಲ್ಲಿ ಆಯ್ಕೆ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)

ಅರ್ಜಿ ಶುಲ್ಕ
i) (General/OBC/EWS): ರೂ. 1000/- + ಅನ್ವಯವಾಗುವ GST
ii) (SC/ST/PwBD) : ರೂ. 250/- (ಕೇವಲ ಸೇವಾ ಶುಲ್ಕ) + GST
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28ನೇ ಸೆಪ್ಟೆಂಬರ್ 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



