CANARA BANK GRADUATE APPRENTICES FOR FY 2026-27: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಪದವೀಧರರಿಗೆ ಪ್ರಸಿದ್ಧ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಅತ್ಯುತ್ತಮ ಅವಕಾಶವನ್ನು ನೀಡಿದೆ. ಭಾರತದಾದ್ಯಂತ ಒಟ್ಟು 3500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕೆನರಾ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
ಗ್ರಾಜುಯೇಟ್ ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ: 3500
ಸಾಮಾನ್ಯ ವರ್ಗ: 1541 ಹುದ್ದೆಗಳು
ಇತರ ಹಿಂದುಳಿದ ವರ್ಗಗಳು: 845 ಹುದ್ದೆಗಳು
ಪರಿಶಿಷ್ಟ ಜಾತಿ: 553 ಹುದ್ದೆಗಳು
ಪರಿಶಿಷ್ಟ ಪಂಗಡ: 226 ಹುದ್ದೆಗಳು
ಆರ್ಥಿಕವಾಗಿ ಹಿಂದುಳಿದ ವರ್ಗ: 335 ಹುದ್ದೆಗಳು
ವಿಕಲಚೇತನರು: ಒಟ್ಟು ಮೀಸಲಾತಿ ನಿಯಮಾವಳಿಗಳ ಅನ್ವಯ 125 ಹುದ್ದೆಗಳು (ಶ್ರವಣದೋಷ-32, ಅಸ್ಥಿಚಲನಾ ವಿಕಲತೆ-30, ದೃಷ್ಟಿದೋಷ-39, ಬೌದ್ಧಿಕ ವಿಕಲತೆ-24).
ಶೈಕ್ಷಣಿಕ ಅರ್ಹತೆ (Educational Qualification):
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಬ್ಯಾಂಕಿಂಗ್/ಕೋ-ಆಪರೇಟಿವ್ ಬ್ಯಾಂಕ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
i) ಮೆರಿಟ್ ಪಟ್ಟಿ ತಯಾರಿಕೆ: ಅಭ್ಯರ್ಥಿಗಳು 12ನೇ ತರಗತಿ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಆಧಾರದ ಮೇಲೆ ರಾಜ್ಯವಾರು ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಒಂದೇ ಅಂಕ ಗಳಿಸಿದ ಸಂದರ್ಭದಲ್ಲಿ ವಯಸ್ಸಿನಲ್ಲಿ ಹಿರಿಯರಾದವರಿಗೆ ಆದ್ಯತೆ ನೀಡಲಾಗುತ್ತದೆ.
ii) ಸ್ಥಳೀಯ ಭಾಷಾ ಪರೀಕ್ಷೆ: 10ನೇ ಅಥವಾ 12ನೇ ತರಗತಿಯಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಸ್ಥಳೀಯ ಭಾಷೆಯನ್ನು ಕಲಿಯದ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಜ್ಞಾನ ಪರೀಕ್ಷೆಯನ್ನು ನಡೆಸಲಾಗುತ್ತದೆ.
iii) ಮೂಲ ದಾಖಲಾತಿಗಳ ಪರಿಶೀಲನೆ: ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಮೂಲ ಶೈಕ್ಷಣಿಕ ಪ್ರಮಾಣಪತ್ರಗಳು, ವಯಸ್ಸಿನ ಪುರಾವೆ, ಜಾತಿ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಗಳ ಪರಿಶೀಲನೆ ನಡೆಸಲಾಗುತ್ತದೆ.
iv) ವೈದ್ಯಕೀಯ ಪರೀಕ್ಷೆ: ದಾಖಲೆ ಪರಿಶೀಲನೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಬ್ಯಾಂಕಿನ ನಿಯಮಗಳ ಪ್ರಕಾರ ವೈದ್ಯಕೀಯ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು.
ಅರ್ಜಿ ಶುಲ್ಕ ವಿವರ:-
i) ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ಅರ್ಜಿ ಶುಲ್ಕ ಇಲ್ಲ
ii) ಉಳಿದ ಅಭ್ಯರ್ಥಿಗಳು – ರೂ. 500.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 17, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




