RRB NTPC Graduate Level : ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಪದವೀಧರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ಒಟ್ಟು 3548 ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರೀಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ಸ್ ಅಸಿಸ್ಟಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ರೈಲ್ವೆ ಇಲಾಖೆಯಲ್ಲಿ 3548 ಹುದ್ದೆಗಳ ಬೃಹತ್ ನೇಮಕಾತಿ 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
i) ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ – 127
ii) ಗೂಡ್ಸ್ ಟ್ರೈನ್ ಮ್ಯಾನೇಜರ್ – 2750
iii) ಜೂನಿಯರ್ ಅಕೌಂಟ್ಸ್ ಅಸಿಸ್ಟಂಟ್ ಕಮ್ ಟೈಪಿಸ್ಟ್ – 300
iv) ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ -371
ಶೈಕ್ಷಣಿಕ ಅರ್ಹತೆ (Educational Qualification):
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ :
ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT).

ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ, ಇತರ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಪುರುಷ ಅಭ್ಯರ್ಥಿಗಳಿಗೆ: 500 ರೂಪಾಯಿಗಳು. ಈ ಪೈಕಿ ಮೊದಲ ಹಂತದ ಗಣಕಯಂತ್ರ ಆಧಾರಿತ ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕ ಕಡಿತಗೊಳಿಸಿ 400 ರೂಪಾಯಿಗಳನ್ನು ಮರುಪಾವತಿಸಲಾಗುತ್ತದೆ.
ii) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು, ವಿಕಲಚೇತನರು, ಮಹಿಳೆಯರು, ತೃತೀಯ ಲಿಂಗಿಗಳು, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ (ಕುಟುಂಬದ ವಾರ್ಷಿಕ ಆದಾಯ 50,000 ರೂಪಾಯಿಗಿಂತ ಕಡಿಮೆ ಇರುವವರು) ಅಭ್ಯರ್ಥಿಗಳಿಗೆ: 250 ರೂಪಾಯಿಗಳು. ಮೊದಲ ಹಂತದ ಗಣಕಯಂತ್ರ ಆಧಾರಿತ ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕ ಕಡಿತಗೊಳಿಸಿ ಸಂಪೂರ್ಣ 250 ರೂಪಾಯಿಗಳನ್ನು ಮರುಪಾವತಿಸಲಾಗುತ್ತದೆ.
ವಯೋಮಿತಿ & ವಯೋಮಿತಿಯಲ್ಲಿ ಸಡಿಲಿಕೆ.
i) ಕನಿಷ್ಠ ವಯಸ್ಸು: 18 ವರ್ಷಗಳು (01-01-2027 ಕ್ಕೆ ಅನ್ವಯವಾಗುವಂತೆ).
ii) ಗರಿಷ್ಠ ವಯಸ್ಸು: 33 ವರ್ಷಗಳು (01-01-2027 ಕ್ಕೆ ಅನ್ವಯವಾಗುವಂತೆ).
ಸಾಮಾನ್ಯ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಅಭ್ಯರ್ಥಿಗಳ ಜನ್ಮದಿನಾಂಕವು 02-01-1994 ರಿಂದ 01-01-2009 ರ ನಡುವೆ ಇರಬೇಕು.
ಸರ್ಕಾರದ ನಿಯಮಾವಳಿಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ:
i) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: 5 ವರ್ಷಗಳು
ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷಗಳು
ii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವಾವಧಿಯನ್ನು ಕಳೆದ ನಂತರ ಸಾಮಾನ್ಯ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ 3 ವರ್ಷ, ಇತರ ಹಿಂದುಳಿದ ವರ್ಗಕ್ಕೆ 6 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ 8 ವರ್ಷ
iii) ವಿಕಲಚೇತನ ಅಭ್ಯರ್ಥಿಗಳಿಗೆ: ಸಾಮಾನ್ಯ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ 10 ವರ್ಷ, ಇತರ ಹಿಂದುಳಿದ ವರ್ಗಕ್ಕೆ 13 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ 15 ವರ್ಷ
iv) ವಿಧವೆಯರು, ವಿಚ್ಛೇದಿತ ಮಹಿಳೆಯರು ಮತ್ತು ಗಂಡನಿಂದ ನ್ಯಾಯಾಲಯದ ಮೂಲಕ ಪ್ರತ್ಯೇಕವಾಗಿರುವ ಮಹಿಳೆಯರಿಗೆ (ಮರುಮದುವೆಯಾಗದಿದ್ದಲ್ಲಿ): ಸಾಮಾನ್ಯ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ 35 ವರ್ಷ, ಇತರ ಹಿಂದುಳಿದ ವರ್ಗಕ್ಕೆ 38 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06-11-2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



