ಕರ್ನಾಟಕದ ವಿವಿಧ ಸ್ನಾತಕೋತ್ತರ ಪದವಿ ಕೇಂದ್ರಗಳಲ್ಲಿ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ, ಪ್ರವೇಶ ಅರ್ಹತಾ ಪರೀಕ್ಷೆ (ಪಿಜಿಸಿಇಟಿ)ಯನ್ನು ನಡೆಸಲು ಆಸಕ್ತರಿಂದ ಇತ್ತೀಚೆಗೆ ಕೆಇಎ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಆಗಸ್ಟ್ 23 ರವರೆಗೆ ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.
2023ನೇ ಸಾಲಿನ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ಗಳ ಪರೀಕ್ಷೆಗಳು ಪೂರ್ಣಗೊಳ್ಳದೇ ಇರುವುದರಿಂದ ಮತ್ತು ಅಭ್ಯರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 09-09-2023 ಮತ್ತು 10-09-2023 ರಂದು ನಡೆಯಬೇಕಿದ್ದ ಪಿಜಿಸಿಇಟಿ 2023 ಪರೀಕ್ಷೆಯನ್ನು ಮುಂದೂಡಲಾಗಿರುತ್ತದೆ. ಪರಿಷ್ಕೃತ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.