ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ – ವೃತ್ತಿ ನ್ಯೂಸ್

ಶೇರ್ ಮಾಡಿ

ಕರ್ನಾಟಕ ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಬೋಧಕ ಹುದ್ದೆಗೆ ಸೇರಲು ಆಸಕ್ತಿ ಇದ್ದಲ್ಲಿ ಅರ್ಜಿ ಸಲ್ಲಿಸಿ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ವಿದ್ಯಾರ್ಹತೆ
i) ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಅನ್ನು ಗಣನೆಗೆ ತೆಗೆದುಕೊಳ್ಳುವುದು.
ii) ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25 ರಷ್ಟು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು.
iii) ಪಿಹೆಚ್‌.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12 ಅಂಕಗಳನ್ನು, ಎನ್‌ಇಟಿ / ಕೆ.ಸೆಟ್ / ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 09 ಅಂಕಗಳನ್ನು, ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದಲ್ಲಿ 06 ಅಂಕಗಳನ್ನು, ಅಲ್ಲದೇ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಪರಿಗಣಿಸಿ ಆಯ್ಕೆ ಪಟ್ಟಿ ಸಿದ್ಧತೆ ನಡೆಸಲಾಗುತ್ತದೆ.

ಅತಿಥಿ ಉಪನ್ಯಾಸಕರಿಗೆ ಗೌರವಧನ ವಿವರ
i) 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.32,000.
ii) 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.30,000.
iii) 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ.28,000.
iv) 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ.26,000.

Advertisement

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-09-2023.
ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ : 04-09-2023.
ಕೌನ್ಸಿಲಿಂಗ್ ನಡೆಸುವ ದಿನಾಂಕಗಳು: 11-09-2023 ರಿಂದ 15-09-2023.
ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ : 16-09-2023.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ ಮಾಡಿ

ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಗಮನಕ್ಕೆ
ಶೈಕ್ಷಣಿಕ ವಿದ್ಯಾರ್ಹತೆ , ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು ಹಾಗೂ ವಿವರವಾದ ಅರ್ಹತಾ ಮಾನದಂಡಗಳನ್ನು ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುಂಚೆ ಅರ್ಹತಾ ವಿವರವನ್ನು ಕಡ್ಡಾಯವಾಗಿ ಪರಿಶೀಲಿಸಲು ಸೂಚಿಸಿದೆ.

ನಿಮ್ಮ ಜವಾಬ್ದಾರಿಗಳು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts