KPSC-2023: 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

ಶೇರ್ ಮಾಡಿ

ಕರ್ನಾಟಕ ಲೋಕಸೇವಾ ಆಯೋಗ (KPSC) ಇಂದ ಸರ್ಕಾರಿ ಹುದ್ದೆ ನೇಮಕ ಅಧಿಸೂಚನೆ ಬಿಡುಗಡೆ ಆಗಿದೆ. ಉಳಿಕೆ ಮೂಲವೃಂದದ ಗ್ರೂಪ್‌ ಸಿ ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ವಿದ್ಯಾರ್ಹತೆ, ವಯಸ್ಸಿನ ಅರ್ಹತೆ, ಪರೀಕ್ಷೆ ಮಾದರಿ, ಇತರೆ ಮಾಹಿತಿಗಳನ್ನು ಇಲ್ಲಿ ತಿಳಿಸಲಾಗಿದೆ. ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆ ಹೆಸರು : ವಾಣಿಜ್ಯ ತೆರಿಗೆ ಪರಿವೀಕ್ಷಕರು
ಹುದ್ದೆಗಳ ಸಂಖ್ಯೆ : 230 (ಗ್ರೂಪ್‌ ಸಿ, ಉಳಿಕೆ ಮೂಲ ವೃಂದ)
ವೇತನ ಶ್ರೇಣಿ : ರೂ.33,450-62,600.
ವಿದ್ಯಾರ್ಹತೆ : ಕಾಮರ್ಸ್‌ ಪದವಿ ಪಡೆದಿರಬೇಕು ಅಥವಾ ಅರ್ಥಶಾಸ್ತ್ರ / ಗಣಿತ ವಿಷಯ ಇರುವ ಪದವಿ.

Advertisement

ವಯೋಮಿತಿ ವಿವರ ಈ ರೀತಿ ಇದೆ.
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

Advertisement

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:-
1ನೇ ಹಂತ : ಪ್ರೊಫೈಲ್ ಕ್ರಿಯೇಟ್‌ / ಅಪ್‌ಡೇಟ್‌.
2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್.
3ನೇ ಹಂತ : ಅಪ್ಲಿಕೇಶನ್‌ ಶುಲ್ಕ ಪಾವತಿ ಮಾಡುವುದು.

ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್‌ ರೂ.35 ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್‌ 30, 2023
ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 04-ನವೆಂಬರ್-2023

ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ ಮಾಡಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸಂಪೂರ್ಣ ವಿವರ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸೂಚನೆ: ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ:-
ಕೇಂದ್ರ ಕಚೇರಿ ಮಾಹಿತಿ ಕೇಂದ್ರ ಮತ್ತು ಸಹಾಯವಾಣಿ ಸಂಖ್ಯೆ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts