RBI Assistant 2023: ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಅಸಿಸ್ಟಂಟ್ ಪೋಸ್ಟ್‌ಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಯ ಹೆಸರು : ಅಸಿಸ್ಟಂಟ್ (ಸಹಾಯಕರು)
ಹುದ್ದೆಗಳ ಸಂಖ್ಯೆ : 450
Advertisement
ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್, ಇಂಜಿನಿಯರಿಂಗ್ ಪದವಿ ಪಾಸ್ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್ ಹಾಕಬಹುದು.
ವಯೋಮಿತಿ ವಿವರ ಈ ರೀತಿ ಇದೆ:-
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಈ
ಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ವೇತನ ಶ್ರೇಣಿ:-
₹.20,700- 55700/-.
ಮನೆ ಬಾಡಿಗೆ ಭತ್ಯೆ ಹೊರತುಪಡಿಸಿ ಅಸಿಸ್ಟಂಟ್ ಹುದ್ದೆಯ ಅಭ್ಯರ್ಥಿ ₹.47,849 ವೇತನವನ್ನು ಮಾಸಿಕ ಬೈಹ್ಯಾಂಡ್ ಪಡೆಯಬಹುದು.
ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-
ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.50/- .
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 450/-.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ IRCMD Eductaion Center Puttur ಗೆ ಭೇಟಿ ಕೊಡಿ. (Karnataka Educational Award winning Institute)
ಆನ್‌ಲೈನ್ ಲಿಖಿತ ಪರೀಕ್ಷೆಯ ವಸ್ತುನಿಷ್ಠ ಪ್ರಕಾರ ಈ ಕೆಳಗಿನಂತಿರುತ್ತದೆ:-
i) Preliminary Examination (Multiple Choice):
Numerical Ability
Reasoning Ability
English Language
ii) Main Examination (Multiple Choice):
Test of Reasoning
Test of English Language
Test of Numerical Ability
Test of General Awareness
Test of Computer Knowledge
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು:-
ಮಂಗಳೂರು , ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಉಡುಪಿ.
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: October 04, 2023
ಫೇಸ್ 1 ಆನ್‌ಲೈನ್ ಪ್ರಿಲಿಮ್ಸ್ ಪರೀಕ್ಷೆ ದಿನಾಂಕ : October 2023
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.