ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್!‌, ಡಿಗ್ರಿ ಓದುತ್ತಿರುವವರಿಗೆ ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, ₹2 ಲಕ್ಷದ ತನಕ ಸ್ಕಾಲರರ್ಶಿಪ್ ಪಡೆಯುವ ಅವಕಾಶ – ವೃತ್ತಿ ನ್ಯೂಸ್.

ಶೇರ್ ಮಾಡಿ

ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . 2023-24ನೇ ಸಾಲಿನ ರಿಲಯನ್ಸ್ ಫೌಂಡೇಶನ್ ವತಿಯಿಂದ (Reliance Foundation Scholarship) ಅರ್ಹ ಪದವಿ ಓದುತ್ತಿರುವ ಸುಮಾರು 5000 ವಿದ್ಯಾರ್ಥಿಗಳಿಗೆ ಪದವಿ ಕಲಿಕೆಗೆ 2 ಲಕ್ಷದ ತನಕ ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Advertisement

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

WhatsApp Group
WhatsApp Channel

ರಿಲಯನ್ಸ್ ಫೌಂಡೇಶನ್ ಸ್ಕಾಲರ್‌ಶಿಪ್ ಬಗ್ಗೆ:-
ಪ್ರತಿ ವರ್ಷದಂತೆ 2023-24 ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಈಗ ಅರ್ಜಿ ಕರೆಯಲಾಗಿದ್ದು, ಪ್ರಥಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತೀ ವರ್ಷ ಬಂದಿರುವ ಅರ್ಜಿಗಳಲ್ಲಿ 5000 ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ವಿದ್ಯಾರ್ಥಿವೇತನ ನೀಡಲಾಗುತ್ತದೆ, ಇವರಿಗೆ ಮೂರು ವರ್ಷದ ಕಲಿಯುವಿಕೆ ಅವದಿಯಲ್ಲಿ ಸುಮಾರು 2 ಲಕ್ಷದ ತನಕ ಸಹಾಯಧನ ನೀಡಲಾಗುತ್ತದೆ.

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ಭಾರತದ ಪ್ರಜೆಯಾಗಿರಬೇಕು.
ii) 12ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.
iii) ಭಾರತ ಅಧಿಕೃತ ವಿಶ್ವವಿದ್ಯಾಲಯದಲ್ಲಿ ಈಗ ಪ್ರಥಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು (Full time).
iv) ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.15 ಲಕ್ಷಗಳಿಗಿಂತ ಕಡಿಮೆಯಿರಬೇಕು.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಆಪ್ಟಿಟ್ಯೂಡ್ ಟೆಸ್ಟ್‌ ನಡೆಸಲಾಗುತ್ತದೆ. ರಿಲಾಯನ್ಸ್‌ ಫೌಂಡೇಷನ್‌ ಸ್ಕಾಲರ್‌ಶಿಪ್‌ ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಆಪ್ಟಿಟ್ಯೂಡ್ ಟೆಸ್ಟ್‌ ಅನ್ನು ಪಾಸ್‌ ಮಾಡಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಪೂರ್ಣ ಪದವಿ ಮುಗಿಯುವವರೆಗೆ ರೂ.2,00,000 ನೀಡಲಾಗುತ್ತದೆ.

ಅರ್ಜಿದಾರರು ಈ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕಾಗಿದೆ –
i) ಪಾಸ್‌ ಪೋರ್ಟ್‌ ಅಳತೆ ಭಾವಚಿತ್ರ.
ii) ಎಸ್‌ಎಸ್‌ಎಲ್‌ಸಿ & ದ್ವಿತೀಯ ಪಿಯುಸಿ ಅಂಕಪಟ್ಟಿ.
iii) ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಗೆ ಪ್ರವೇಶ ಪಡೆದ ದಾಖಲೆ.
iv) ಆದಾಯ ಪ್ರಮಾಣ ಪತ್ರ
v) ಆಧಾರ್ ಕಾರ್ಡ್.

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 15-ಅಕ್ಟೋಬರ್-2023

ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts