DXC ಟೆಕ್ನಾಲಜಿ ನೀಡುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಿ. ಒಂದು ಬಾರಿಗೆ ₹.50,000 ವರೆಗೆ ಸ್ಕಾಲರ್‌ಶಿಪ್ ಪಡೆಯಿರಿ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
Vritti News (JOB NEWS) channel on WhatsApp:
Advertisement
ಡಿಎಕ್ಸ್‌ಸಿ ಪ್ರೊಗ್ರೆಸಿಂಗ್ ಮೈಂಡ್ಸ್ ಸ್ಕಾಲರ್‌ಶಿಪ್ ಬಗ್ಗೆ:-
ಡಿಎಕ್ಸ್‌ಸಿ ಪ್ರೊಗ್ರೆಸಿಂಗ್ ಮೈಂಡ್ಸ್ ಸ್ಕಾಲರ್‌ಶಿಪ್ ಪ್ರೋಗ್ರಾಮ್ ಅನ್ನು ಡಿಎಕ್ಸ್ಸಿ ಟೆಕ್ನಾಲಜಿ ಕಂಪನಿ (ಐಟಿ ಕಂಪನಿ) ಜಾರಿಗೊಳಿಸಿರುವ ಒಂದು ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಸಹಾಯ ಮಾಡುವ ಹಾಗೂ ಕ್ರೀಡಾ ವೆಚ್ಚ ಭರಿಸುವ ಒಂದು ಉದ್ದೇಶವನ್ನು ಈ ಪ್ರೋಗ್ರಾಮ್ ಹೊಂದಿದೆ. ಈ ರಾಷ್ಟ್ರೀಯ ಮಟ್ಟದ ಸ್ಕಾಲರ್‌ಶಿಪ್ ಪ್ರೋಗ್ರಾಮ್‌ಗೆ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಗಣಿತ ಕೋರ್ಸ್‌ಗಳನ್ನು ಓದುತ್ತಿರುವ ವಿದ್ಯಾರ್ಥಿನಿಯರು, ತೃತೀಯ ಲಿಂಗಿ ವಿದ್ಯಾರ್ಥಿಗಳು ಅರ್ಹರು. ಅರ್ಜಿ ಸಲ್ಲಿಸಿ ಆಯ್ಕೆಯಾದವರು ಒಂದು ಬಾರಿಗೆ ರೂ.50,000 ವಿದ್ಯಾರ್ಥಿವೇತನ ಪಡೆದು ಶಿಕ್ಷಣ ಮುಂದುವರೆಸಬಹುದು. ಅಲ್ಲದೇ ಮಹಿಳಾ ಕ್ರೀಡಾ ಪಟುಗಳನ್ನು (ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಿದವರು) ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇವರಿಗೆ ಒಂದು ಬಾರಿಗೆ ರೂ.1,25,000 ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.
ಡಿಎಕ್ಸ್‌ಸಿ ಪ್ರೊಗ್ರೆಸಿಂಗ್ ಮೈಂಡ್ಸ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) – ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಗಣಿತ ಪದವಿ ಕೋರ್ಸ್ ಓದುತ್ತಿರುವ ಮಹಿಳಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ii) ತಮ್ಮ ಹಿಂದಿನ ತರಗತಿಯಲ್ಲಿ 60% ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.
iii) ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 4 ಲಕ್ಷಗಳಿಗಿಂತ ಕಡಿಮೆಯಿರಬೇಕು.
iv) ಆಯ್ಕೆಯಾದವರಿಗೆ ಒಂದು ಬಾರಿಗೆ ರೂ.50,000 ಸ್ಕಾಲರ್‌ಶಿಪ್ ಹಣ ನೀಡಲಾಗುತ್ತದೆ.
v) ತೃತೀಯ ಲಿಂಗಿ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.
ಕ್ರೀಡಾಪಟುಗಳಿಗೆ ಡಿಎಕ್ಸ್‌ಸಿ ಪ್ರೊಗ್ರೆಸಿಂಗ್ ಮೈಂಡ್ಸ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) 13-25 ವರ್ಷದ ವಯಸ್ಸಿನ ಕ್ರೀಡಾಪಟು ಆಗಿರಬೇಕು.
ii) ಕಳೆದ 2/3 ವರ್ಷಗಳಲ್ಲಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಿದವರು ಅರ್ಜಿ ಸಲ್ಲಿಸಬಹುದು.
iii) 8 ನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದು.
iv) ವಾರ್ಷಿಕ ಆದಾಯ ರೂ.5 ಲಕ್ಷ ಮೀರಿರಬಾರದು.
v) ಆಯ್ಕೆಯಾದವರಿಗೆ ಒಂದು ಬಾರಿಗೆ ರೂ.1.25,000 ಸ್ಕಾಲರ್‌ಶಿಪ್ ಹಣ ನೀಡಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-ಅಕ್ಟೋಬರ್-2023
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.