Bank Jobs in Chitradurga : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಖಾಲಿ ಇರುವ ಎಸ್‌ಡಿಎ, ಎಫ್‌ಡಿಎ, ಕಂಪ್ಯೂಟರ್ ಇಂಜಿನಿಯರ್, ವ್ಯವಸ್ಥಾಪಕರು, ಡ್ರೈವರ್, ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :-
i) ಹುದ್ದೆಯ ಹೆಸರು : ಪ್ರಥಮ ದರ್ಜೆ ಗುಮಾಸ್ತರು
ವೇತನ ಶ್ರೇಣಿ: Rs.37900-70850
ವಿದ್ಯಾರ್ಹತೆ: ಪದವಿ ಜತೆಗೆ ಕಂಪ್ಯೂಟರ್ ಜ್ಞಾನ.
ii) ಹುದ್ದೆಯ ಹೆಸರು : ದ್ವಿತೀಯ ದರ್ಜೆ ಗುಮಾಸ್ತರು
ವೇತನ ಶ್ರೇಣಿ: Rs.37900-70850
ವಿದ್ಯಾರ್ಹತೆ: ಪದವಿ ಜತೆಗೆ ಕಂಪ್ಯೂಟರ್ ಜ್ಞಾನ.
iii) ಹುದ್ದೆಯ ಹೆಸರು : ಸಹಾಯಕ ಪ್ರಧಾನ ವ್ಯವಸ್ಥಾಪಕರು
ವೇತನ ಶ್ರೇಣಿ: Rs.40900-78200
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ.
iv) ಹುದ್ದೆಯ ಹೆಸರು : ಕಂಪ್ಯೂಟರ್ ಇಂಜಿನಿಯರ್
ವೇತನ ಶ್ರೇಣಿ: Rs.30350-58250
ವಿದ್ಯಾರ್ಹತೆ: ಬಿಇ ಇನ್ ಕಂಪ್ಯೂಟರ್ ಸೈನ್ಸ್ / ಬಿಸಿಎ ಪಾಸ್.
v) ಹುದ್ದೆಯ ಹೆಸರು : ವಾಹನ ಚಾಲಕರು
ವೇತನ ಶ್ರೇಣಿ: Rs.27650- 52650
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್ ಜತೆಗೆ, ಲಘು, ಬೃಹತ್ ವಾಹನ ಚಾಲನೆ ಪರವಾನಗಿ .
vi) ಹುದ್ದೆಯ ಹೆಸರು : ಅಟೆಂಡರ್ /ಸಹಾಯಕರು
ವೇತನ ಶ್ರೇಣಿ: Rs.23500-47650
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದವರಿಗೆ 35 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಪ್ರಧಾನ ವ್ಯವಸ್ಥಾಪಕರು, ಎಸ್‌ಡಿಎ, ಎಫ್‌ಡಿಎ, ಕಂಪ್ಯೂಟರ್ ಇಂಜಿನಿಯರ್‌ಗಳಿಗೆ ಗರಿಷ್ಠ 200 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ಅಟೆಂಡರ್ ಹುದ್ದೆಗೆ ಗರಿಷ್ಠ 100 ಅಂಕಗಳಿಗೆ ಪರೀಕ್ಷೆ ನಡೆಸಿ ಆಯ್ಕೆ ನಡೆಸಲಾಗುತ್ತದೆ. ಚಾಲಕ ಹುದ್ದೆಗಳಿಗೆ ಕಾರ್ಯಾನುಭವದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-10-2023
ಅರ್ಜಿ ಶುಲ್ಕ ವಿವರ:-
ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದವರಿಗೆ ರೂ.1500.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರು, ಮಾಜಿ ಸೈನಿಕ, ವಿಧವಾ ಅಭ್ಯರ್ಥಿಗಳಿಗೆ ರೂ.750.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಂಪರ್ಕ ವಿವರ:-
ದೂರವಾಣಿ : +91 9019796412
ಇಮೇಲ್ : [email protected]
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.