BEML Jobs : ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ರಕ್ಷಣಾ ಸಚಿವಾಲಯದ ಅಡಿಯಲ್ಲಿ ‘ಶೆಡ್ಯೂಲ್ ‘ಎ’ ಕಂಪನಿ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್, ರಕ್ಷಣೆ, ರೈಲು, ವಿದ್ಯುತ್, ಗಣಿಗಾರಿಕೆ ಮತ್ತು ಮೂಲಸೌಕರ್ಯಗಳಂತಹ ಭಾರತದ ಪ್ರಮುಖ ಕ್ಷೇತ್ರಗಳಿಗೆ ಸೇವೆ ಸಲ್ಲಿಸುತ್ತದೆ. ತನ್ನ ಉತ್ಪಾದನಾ ಘಟಕಗಳು, ಮಾರ್ಕೆಟಿಂಗ್ ವಿಭಾಗಗಳಿಗೆ ಅಗತ್ಯ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಹೊರಡಿಸಿದೆ. ಒಟ್ಟು 119 ಟೆಕ್ನಿಕಲ್, ನಾನ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ ಈ ರೀತಿ ಇದೆ :-
i) ಡಿಪ್ಲೊಮ ಟ್ರೈನಿ ( ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಸಿವಿಲ್)
ii) ಐಟಿಐ ಟ್ರೈನಿ (ಟರ್ನರ್, ಮಷಿನಿಸ್ಟ್)
iii) ಸ್ಟಾಫ್ ನರ್ಸ್
ವಯೋಮಿತಿ ವಿವರ ಈ ರೀತಿ ಇದೆ:-
ಡಿಪ್ಲೊಮ ಟ್ರೈನಿ ಮತ್ತು ಐಟಿಐ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 29 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು. ಸ್ಟಾಫ್ ನರ್ಸ್ ಹುದ್ದೆಗೆ 30 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಸ್ಪರ್ಧಾತ್ಮಕ ಆನ್‌ಲೈನ್ ಲಿಖಿತ ಪರೀಕ್ಷೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.10.2023 (ಸಂಜೆ 06 ಗಂಟೆವರೆಗೆ)
ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ ರೂ.200. ಅನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.