KEA Staff Nurse Recruitment 2023 : ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 100 ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಿದ್ದು, ನರ್ಸಿಂಗ್ ಶೈಕ್ಷಣಿಕ ಅರ್ಹತೆ ಪಡೆದವರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ ಸ್ಟಾಫ್ ನರ್ಸ್ (ಶುಶ್ರೂಷಾಧಿಕಾರಿ) ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಿದ್ದು, ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಹುದ್ದೆಯ ಹೆಸರು : ಸ್ಟಾಫ್‌ನರ್ಸ್ (ಶುಶ್ರೂಷಾಧಿಕಾರಿ)
ವೇತನ ಶ್ರೇಣಿ: ₹ 33,450 ರಿಂದ ₹62600
ವಿದ್ಯಾರ್ಹತೆ: ಡಿಪ್ಲೊಮ ನರ್ಸಿಂಗ್ / ಬಿಎಸ್ಸಿ ನರ್ಸಿಂಗ್ ಉತ್ತೀರ್ಣರಾಗಿ, ನರ್ಸಿಂಗ್ ಕೌನ್ಸಿಲ್‌ನಲ್ಲಿ ರಿಜಿಸ್ಟ್ರೇಷನ್ ಪಡೆದಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ ವಯಸ್ಸಿನ ಅರ್ಹತೆ ಜೆನೆರಲ್ ಕೆಟಗರಿಯವರಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಒಟ್ಟು 100 ಅಂಕಗಳ 2 ಗಂಟೆ ಅವಧಿಯ ಪರೀಕ್ಷೆ ಇರುತ್ತದೆ. ಇದರಲ್ಲಿ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ತಾರ್ಕಿಕ ಮತ್ತು ಮಾನಸಿಕ ಸಾಮರ್ಥ್ಯ, ಕಂಪ್ಯೂಟರ್ ಜ್ಞಾನ ಕುರಿತು ಭಾಗ ಒಂದರಲ್ಲಿ 20 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಭಾಗ 2 ರಲ್ಲಿ ಉಳಿದ 80 ಅಂಕಗಳಿಗೆ ಜಿಎನ್‌ಎಂ / ಬಿಎಸ್ಸಿ ನರ್ಸಿಂಗ್ ಕುರಿತ ವಿಷಯಗಳ ಕುರಿತು ಪ್ರಶ್ನೆ ಇರುತ್ತದೆ.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಭೇಟಿ ಕೊಡಿ:-
IRCMD Education Center, Puttur & Sullia. Ph: 9632320477
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-11-2023
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ಪ್ರವರ್ಗದವರಿಗೆ ರೂ.750.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.500.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.