ಮಂಗಳೂರು । ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ-2023 , SSLC ಪಾಸ್ – ವೃತ್ತಿ ನ್ಯೂಸ್.

ಶೇರ್ ಮಾಡಿ

Dakshina Kannada District Court Recruitment 2023 : ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ಅರ್ಜಿ ಸಲ್ಲಿಸಿ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 54 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಮತ್ತು ವೇತನ:-
i) ಶೀಘ್ರಲಿಪಿಗಾರರು ಗ್ರೇಡ್ 3 – 10
ವೇತನ ಶ್ರೇಣಿ : 27650-52650
ii) ಬೆರಳಚ್ಚುಗಾರರು – 6
ವೇತನ ಶ್ರೇಣಿ : 21400-42000
iii) ಬೆರಳಚ್ಚು ನಕಲುಗಾರರು -2
ವೇತನ ಶ್ರೇಣಿ : 21400-42000
iv) ಜವಾನ – 36
ವೇತನ ಶ್ರೇಣಿ : 17000-28950

ಶೈಕ್ಷಣಿಕ ಅರ್ಹತೆ ವಿವರ :

i) ಶೀಘ್ರಲಿಪಿಗಾರರು ಗ್ರೇಡ್ 3 – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ ಗ್ರೇಡ) ಮತ್ತು ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ii) ಬೆರಳಚ್ಚುಗಾರರು – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

iii) ಬೆರಳಚ್ಚು ನಕಲುಗಾರರು – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ (ಜೂನಿಯರ್ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

iv) ಜವಾನ – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
i) ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ii) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
iii) ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
i) ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ii) ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :-
i) ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 06, 2023
ii) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 05, 2023

ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
ii) ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473

Related posts