Kodagu District Court Recruitment 2023 : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
i) ಹುದ್ದೆಯ ಹೆಸರು : ಜವಾನ/ ಸೇವಕ
ವೇತನ ಶ್ರೇಣಿ: 17000-28950
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ.
ii) ಹುದ್ದೆಯ ಹೆಸರು : ಆದೇಶಿಕ ಜಾರಿಕಾರರು
ವೇತನ ಶ್ರೇಣಿ: 19950-37900
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ.
iii) ಹುದ್ದೆಯ ಹೆಸರು : ಬೆರಳಚ್ಚು ನಕಲುಗಾರರು
ವೇತನ ಶ್ರೇಣಿ: 21400-42000
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕಿರಿಯದರ್ಜೆ (ಜೂನಿಯರ್ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
iv) ಹುದ್ದೆಯ ಹೆಸರು : ಬೆರಳಚ್ಚುಗಾರರು
ವೇತನ ಶ್ರೇಣಿ: 21400-42000
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
v) ಹುದ್ದೆಯ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3
ವೇತನ ಶ್ರೇಣಿ: 27650-52650
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ.
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38.
– ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
– ಆದೇಶಿಕ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
– ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 10, 2023
ಅರ್ಜಿ ಶುಲ್ಕ ವಿವರ:-
– ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300.
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150.
– ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಜಿಲ್ಲಾ ನ್ಯಾಯಾಲಯ ಕೊಡಗು ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು 8088962473 ಗೆ ವಾಟ್ಸಪ್ಪ್ ಮಾಡಿ