ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ ದೇಶದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಪಡೆಯಲು 2.50 ಲಕ್ಷ ಸ್ಕಾಲರ್‌ಶಿಪ್ ಪಡೆಯಲು ಸದಾವಕಾಶ. ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:-
Advertisement
L’Oréal India For Young Women In Science Scholarships: ಲಾರಿಯಲ್ ಇಂಡಿಯಾವು (L’Oréal India) 2023ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪಾಸ್ ಮಾಡಿದ, ವಿಜ್ಞಾನ ವಿಷಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ಇರುವ / ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಂದ ‘ಲಾರಿಯಲ್ ಇಂಡಿಯಾ ಫಾರ್ ಯಂಗ್ ವೂಮೆನ್ ಇನ್ ಸೈನ್ಸ್ ಸ್ಕಾಲರ್‌ಶಿಪ್ 2023’ ಗೆ ಅರ್ಜಿ ಆಹ್ವಾನಿಸಿದೆ. ಈ ಸ್ಕಾಲರ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಿಜ್ಞಾನ ವಿಭಾಗದ ಯಾವುದೇ ಉನ್ನತ ಶಿಕ್ಷಣಕ್ಕೆ (ಪ್ಯೂರ್ ಸೈನ್ಸ್ / ಅಪ್ಲೈಡ್ ಸೈನ್ಸ್ / ಇಂಜಿನಿಯರಿಂಗ್/ ಮೆಡಿಕಲ್, ಇತರೆ) ಕಾಲೇಜು ಶುಲ್ಕ, ಇತರೆ ವೆಚ್ಚಗಳಿಗೆ ಹಣಕಾಸಿನ ನೆರವನ್ನು ಸ್ಕಾಲರ್‌ಶಿಪ್ ನೀಡಲಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ಲಾರಿಯಲ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ದೇಶದ ವಿದ್ಯಾರ್ಥಿನಿಯರು ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ / 12ನೇ ತರಗತಿ ಪಾಸ್ ಮಾಡಿರಬೇಕು. (2022-23ನೇ ಸಾಲಿನಲ್ಲಿ)
ii) ಪಿಸಿಎಮ್ / ಪಿಸಿಬಿ / ಪಿಸಿಎಂಬಿ ಕ್ಲಾಸ್ 12th ಶಿಕ್ಷಣದಲ್ಲಿ ಕನಿಷ್ಠ ಶೇಕಡ.85 ಅಂಕಗಳನ್ನು ಪಡೆದಿರಬೇಕು.
iii) ವಿದ್ಯಾರ್ಥಿನಿಯರ ಕುಟುಂಬದ ವಾರ್ಷಿಕ ಆದಾಯ ರೂ.6,00,000 ಮೀರಿರಬಾರದು.
iv) 2023-24ನೇ ಸಾಲಿನಲ್ಲಿ ವಿಜ್ಞಾನದ ಯಾವುದೇ ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆದಿರಬೇಕು.
v) ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪಾಸಾದ ಒಂದು ವರ್ಷದ ನಂತರ ಪದವಿಗೆ ಪ್ರವೇಶ ಪಡೆದಿದ್ದಲ್ಲಿ ಅರ್ಜಿಗೆ ಅವಕಾಶ ಇಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
vi) ಶಾಲಾ ಅಧಿಕಾರಿಗಳು ದೃಢೀಕರಿಸಿದ 10 ನೇ ತರಗತಿಯ ಅಂಕಪಟ್ಟಿ.
vii) ಶಾಲಾ ಅಧಿಕಾರಿಗಳು ದೃಢೀಕರಿಸಿದ 12 ನೇ ತರಗತಿಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 07-ಜನವರಿ-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:-
ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.