HDFC Bank Parivartan’s Educational Crisis Scholarship Support (ECSS) Programme: ಭಾರತದ ಪ್ರಮುಖ ಬ್ಯಾಂಕಿಂಗ್ ಮತ್ತು ಹಣಕಾಸು ಸೇವಾ ಸಂಸ್ಥೆ ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನ್ ಸ್ಕಾಲರರ್ಶಿಪ್ ಗೆ ಅರ್ಜಿ ಆಹ್ವಾನಿಸಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ , ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ. ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ . ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿವೇತನ:-
i) 1 ರಿಂದ 6 ನೇ ತರಗತಿಗೆ – ₹15,000
ii) 7 ರಿಂದ 12 ನೇ ತರಗತಿ, ಡಿಪ್ಲೊಮಾ, ITI ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ – ₹18,000
iii) ಸಾಮಾನ್ಯ ಪದವಿಪೂರ್ವ ಕೋರ್ಸ್ಗಳಿಗೆ – ₹30,000
iv) ವೃತ್ತಿಪರ ಪದವಿಪೂರ್ವ ಕೋರ್ಸ್ಗಳಿಗೆ – ₹50,000
v) ಸಾಮಾನ್ಯ ಸ್ನಾತಕೋತ್ತರ ಕೋರ್ಸ್ಗಳಿಗೆ – ₹35,000
vi) ವೃತ್ತಿಪರ ಸ್ನಾತಕೋತ್ತರ ಕೋರ್ಸ್ಗಳಿಗೆ – ₹75,000
ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ii) ಅರ್ಜಿದಾರರು ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
iii) ಕುಟುಂಬದ ವಾರ್ಷಿಕ ಆದಾಯವು INR 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-ಡಿಸೆಂಬರ್-2023
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:-
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473