IOCL Recruitment 2024: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಹಾಗೂ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಐಟಿಐ / ಪಿಯುಸಿ / ಡಿಪ್ಲೊಮ / ಬಿಎ, ಬಿಎಸ್ಸಿ, ಬಿಕಾಂ ಅರ್ಹತೆ ಪಡೆದಿರುವವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1814 ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸಂಪೂರ್ಣವಾಗಿ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :-
i) ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್.
ವಿದ್ಯಾರ್ಹತೆ: ಪಿಯುಸಿ (10+2 Intermediate).
ii) ಗ್ರಾಜುಯೇಟ್ ಅಪ್ರೆಂಟಿಸ್.
ವಿದ್ಯಾರ್ಹತೆ: ಯಾವುದೇ ಪದವಿ (BA/B. Com/B. Sc.)
iii) ಟ್ರೇಡ್ ಅಪ್ರೆಂಟಿಸ್.
ವಿದ್ಯಾರ್ಹತೆ: ಐಟಿಐ ಪಾಸ್ ಮಾಡಿರಬೇಕು.
iv) ಟೆಕ್ನೀಷಿಯನ್ ಅಪ್ರೆಂಟಿಸ್
ವಿದ್ಯಾರ್ಹತೆ: ಡಿಪ್ಲೊಮ ಪಾಸ್ ಮಾಡಿರಬೇಕು.
ಇದನ್ನೂ ಓದಿ: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹.2.5 ಲಕ್ಷವರೆಗೆ ಲಾರಿಯಲ್ ಇಂಡಿಯಾ ಸ್ಕಾಲರರ್ಶಿಪ್ ಪಡೆಯುವ ಅವಕಾಶ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ / ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುತ್ತದೆ.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಇದನ್ನೂ ಓದಿ: 1ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಸ್ಕಾಲರರ್ಶಿಪ್ ಪಡೆಯುವ ಅವಕಾಶ
ಅರ್ಜಿ ಶುಲ್ಕ ವಿವರ:-
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05/01/2024 upto 05 PM
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
IOCL ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473