Oil India Limited Recruitment 2024 : ಆಯಿಲ್ ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಒಡೆತನದ ಉದ್ಯಮವಾಗಿದೆ. ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಪಿಯುಸಿ, ಐ ಟಿ ಐ, ಡಿಪ್ಲೊಮ, ಡಿಗ್ರಿ ಪಾಸಾದವರನ್ನು ವಿವಿಧ ಗ್ರೇಡ್ನ ವರ್ಕ್ ಪರ್ಸನ್ ಆಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Vritti News (JOB NEWS) channel on WhatsApp:
Advertisement
ಆಯಿಲ್ ಇಂಡಿಯಾ ಲಿಮಿಟೆಡ್ ತನ್ನ ಘಟಕದಲ್ಲಿ ಖಾಲಿ ಇರುವ ವರ್ಕ್ ಪರ್ಸನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. . ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ವಿದ್ಯಾರ್ಹತೆ, ವಯಸ್ಸಿನ ಅರ್ಹತೆ, ಪ್ರಮುಖ ದಿನಾಂಕಗಳು, ವೇತನ ವಿವರ, ಇತರೆ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ವರ್ಕ್ ಪರ್ಸನ್ – 421
ವಿದ್ಯಾರ್ಹತೆ: ಪಿಯುಸಿ, ಡಿಗ್ರಿ , ಐಟಿಐ, ಡಿಪ್ಲೊಮ ಪಾಸಾದವರು ಅರ್ಜಿ ಸಲ್ಲಿಸಿ.
ವೇತನ ಶ್ರೇಣಿ: ₹20,000 ದಿಂದ ₹35,000 ವರೆಗೆ
ಇದನ್ನೂ ಓದಿ : AIESLನಲ್ಲಿ ಸೂಪರ್ವೈಸರ್ ಹುದ್ದೆಗಳು
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ಮೀರಿರಬಾರದು.
ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 36 ವರ್ಷ ವಯಸ್ಸು ಮೀರಿರಬಾರದು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಪರೀಕ್ಷೆಯ ರಚನೆ ಈ ರೀತಿ ಇದೆ: ಒಟ್ಟು 100 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಹುದ್ದೆಗೆ ಸಂಬಂಧಿತ ವಿದ್ಯಾರ್ಹತೆ ಮತ್ತು ಟೆಕ್ನಿಕಲ್ ಅರಿವಿನ ಬಗ್ಗೆ 60 ಅಂಕಗಳಿಗೆ, ರೀಸನಿಂಗ್ ಅರಿಥ್ಮೆಟಿಕ್, ಮೆಂಟಲ್ ಎಬಿಲಿಟಿ ಕುರಿತು 20 ಅಂಕಗಳಿಗೆ, ಇಂಗ್ಲಿಷ್ ಭಾಷೆ ಮತ್ತು ಸಾಮಾನ್ಯ ಜ್ಞಾನ ಕುರಿತು 20 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಶಾರ್ಟ್ ಲಿಸ್ಟ್ ಆದವರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ನಂತರ ಅಂತಿಮವಾಗಿ ಮೆಡಿಕಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200/-.
ಎಸ್ಸಿ / ಎಸ್ಟಿ / EWS/ Pwd / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-01-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
Oil India Limited ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ.
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473