Central Bank of India Recruitment 2024 : ಬ್ಯಾಂಕ್ ಉದ್ಯೋಗ ಹುಡುಕುತ್ತಿದ್ದೀರಾ… ಇಲ್ಲಿದೆ ನೋಡಿ ಗುಡ್ ನ್ಯೂಸ್. ದೇಶದಾದ್ಯಂತ 4500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿರುವ ಮುಂಚೂಣಿ ಪಬ್ಲಿಕ್ ಸೆಕ್ಟಾರ್ ಬ್ಯಾಂಕ್ಗಳಲ್ಲಿ ಒಂದಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾವು ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳನ್ನು 2024-25ನೇ ಹಣಕಾಸಿನ ವರ್ಷಕ್ಕೆ ಭರ್ತಿ ಮಾಡಲು ನೇಮಕ ಪ್ರಕಟಣೆ ಹೊರಡಿಸಿದೆ. ಬ್ಯಾಂಕ್ ಉದ್ಯೋಗ ಆಸಕ್ತ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಹುದ್ದೆಗಳ ವಿವರ :-
ಅಪ್ರೆಂಟಿಸ್ – 3000 ಹುದ್ದೆಗಳು
ವಿದ್ಯಾರ್ಹತೆ: ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ದಿನಾಂಕ 01-04-1996 ಮತ್ತು 31-03-2004 ರ ನಡುವೆ ಜನಿಸಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
(ನೇರ ಮತ್ತು ಆನ್ಲೈನ್ ತರಗತಿಗಳು ಲಭ್ಯವಿದೆ)
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.800.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.400.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಪ್ರೆಂಟಿಸ್ ಹುದ್ದೆಗಳ ಕುರಿತ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ಅಧಿಸೂಚನೆಯನ್ನು ಕ್ಲಿಕ್ ಮಾಡಿ ಸಹ ಓದಬಹುದು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06-ಮಾರ್ಚ್-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473