KLC Karnataka Legislative Council Recruitment 2024 : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ವಾಹನ ಚಾಲಕರು ಹಾಗೂ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ ಭರ್ತಿ ಆಗಲಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅದರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ, ವೇತನ ಶ್ರೇಣಿ ವಿದ್ಯಾರ್ಹತೆ :-
i) ಗ್ರೂಪ್ ಡಿ ಹುದ್ದೆಗಳು (ದಲಾಯತ್ / ಕಾವಲುಗಾರರು / ಸ್ವೀಪರ್ ಕಮ್ ಸ್ಕ್ಯಾವೆಂಜರ್ / ಸೆಕ್ಯೂರಿಟಿ ಗಾರ್ಡ್) : 29
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು.
ವೇತನ ಶ್ರೇಣಿ: Rs.17,000-28950.
ii) ವಾಹನ ಚಾಲಕರು : 03
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್. ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಮೋಟಾರು ಕಾರುಗಳ ಚಾಲನೆಯಲ್ಲಿ ಮೂರು ವರ್ಷಗಳಿಗೆ ಕಡಿಮೆ ಇಲ್ಲದಂತೆ ಪ್ರಾಯೋಗಿಕ ಅನುಭವವನ್ನು ಹೊಂದಿರಬೇಕು.
ವೇತನ ಶ್ರೇಣಿ: 21,400-42,000.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ ಮೀರಿರಬಾರದು, ಇತರೆ ಹಿಂದುಳಿದ ವರ್ಗದವರಿಗೆ ಗರಿಷ್ಠ 38 ವರ್ಷ ಮೀರಿರಬಾರದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಆಯ್ಕೆ ವಿಧಾನ :
ವಾಹನ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ (R.T.O) ಅವರಿಂದ ವಾಹನ ಚಾಲನಾ ಪರೀಕ್ಷೆಯನ್ನು ನಡೆಸಿ, ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು ಹಾಗೂ “ಡಿ” ಗುಂಪು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್ಸಿ / ಎಸ್ಟಿ / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:-
ಅರ್ಜಿಗಳನ್ನು ಸಚಿವಾಲಯದ ವೆಬ್ಸೈಟ್ ನಲ್ಲಿ ನೀಡಿದ್ದು ನಮೂನೆ-1 ರ ದ್ವಿಪ್ರತಿಯಲ್ಲಿ ಅಗತ್ಯವುಳ್ಳ ದಾಖಲೆಗಳನ್ನು ಲಗತ್ತಿಸಿ, ಕೊನೆಯ ದಿನಾಂಕ 05-04-2024 ರಂದು ಸಂಜೆ 05-00 ಗಂಟೆಯ ಒಳಗಾಗಿ ಅಂಚೆಯ ಮೂಲಕ ವಿಳಾಸ – ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ – 5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560 001 ರ ವಿಳಾಸಕ್ಕೆ ಅಥವಾ ಖುದ್ದಾಗಿ ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 216 ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ತಲುಪಿಸತಕ್ಕದ್ದು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION Click here.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473