Mangalore Catholic Cooperative Bank Recruitment 2024 : ಕಡಲತಡಿಯ ಅತ್ಯುತ್ತಮ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ‘ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ ಹಲವು ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿರಿಯ ಪ್ರಬಂಧಕರು, ಶಾಖಾ ಪರಿವೀಕ್ಷಕರು, ವಸೂಲಾತಿ ಅಧಿಕಾರಿ, ಶಾಖಾ ವ್ಯವಸ್ಥಾಪಕರು, ಸುಪರ್ವೈಸರ್, ಮುಖ್ಯ ಅಕೌಂಟೆಂಟ್, ಅಕೌಂಟೆಂಟ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಕಿರಿಯ ಅಧಿಕಾರಿ, ಹಿರಿಯ ಸಹಾಯಕ, ಕಿರಿಯ ಸಹಾಯಕ, ಅಟೆಂಡರ್/ಡ್ರೈವರ್ ಇತ್ಯಾದಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಿ., ಮಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ :-
i) ಹಿರಿಯ ಪ್ರಬಂಧಕರು (Senior Manager)
ವೇತನ ಶ್ರೇಣಿ: 30400-51300
ii) ಶಾಖಾ ಪರಿವೀಕ್ಷಕರು (Branch Inspector)
ವೇತನ ಶ್ರೇಣಿ: 30400-51300
iii) ವಸೂಲಾತಿ ಅಧಿಕಾರಿ (Recovery Officer)
ವೇತನ ಶ್ರೇಣಿ: 30400-51300
iv) ಶಾಖಾ ವ್ಯವಸ್ಥಾಪಕರು (Branch Manager)
ವೇತನ ಶ್ರೇಣಿ: 28100-50100
v) ಸುಪರ್ವೈಸರ್ (Supervisor)
ವೇತನ ಶ್ರೇಣಿ: 28100-50100
vi) ಮುಖ್ಯ ಅಕೌಂಟೆಂಟ್ (Chief Accountant)
ವೇತನ ಶ್ರೇಣಿ: 28100-50100
vii) ಅಕೌಂಟೆಂಟ್ (Accountant)
ವೇತನ ಶ್ರೇಣಿ: 26000-47700
viii) ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ (DBA)
ವೇತನ ಶ್ರೇಣಿ: 26000-47700
ix) ಕಿರಿಯ ಅಧಿಕಾರಿ (Junior Officer)
ವೇತನ ಶ್ರೇಣಿ: 24000-45300
x) ಹಿರಿಯ ಸಹಾಯಕ (Senior Assistant)
ವೇತನ ಶ್ರೇಣಿ: 21600-40050
xi) ಕಿರಿಯ ಸಹಾಯಕ (Junior Assistant)
ವೇತನ ಶ್ರೇಣಿ: 20000-36300
xii) ಅಟೆಂಡರ್/ಡ್ರೈವರ್ (Attender/Driver)
ವೇತನ ಶ್ರೇಣಿ: 16000-29600
ವಿದ್ಯಾರ್ಹತೆ:
i) ಹಿರಿಯ ಪ್ರಬಂಧಕರು, ಶಾಖಾ ಪರಿವೀಕ್ಷಕರು, ವಸೂಲಾತಿ ಅಧಿಕಾರಿ, ಶಾಖಾ ವ್ಯವಸ್ಥಾಪಕರು, ಸುಪರ್ವೈಸರ್ – ಯಾವುದೇ ವಿಷಯದಲ್ಲಿ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ii) ಮುಖ್ಯ ಅಕೌಂಟೆಂಟ್ – ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
iii) ಅಕೌಂಟೆಂಟ್ – ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಹಾಗೂ ಟ್ಯಾಲಿ ಕೋರ್ಸ ತೇರ್ಗಡೆಯಾದ ಪ್ರಮಾಣಪತ್ರ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
iv) ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – ಗಣಕ ವಿಜ್ಞಾನದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
v) ಕಿರಿಯ ಅಧಿಕಾರಿ, ಹಿರಿಯ ಸಹಾಯಕ, ಕಿರಿಯ ಸಹಾಯಕ – ಯಾವುದೇ ಪದವಿ ಹಾಗೂ ಕಂಪ್ಯೂಟರಿನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.
vi) ಅಟೆಂಡರ್/ಡ್ರೈವರ್ – ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು. ಚಾಲನಾ ಪರವಾನಿಗೆ ಕಡ್ಡಾಯ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
i) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ii) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
iii) ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. (ಅಟೆಂಡರ್/ಡ್ರೈವರ್ ಹುದ್ದೆಗೆ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.)
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : 250/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 1000/-ರೂ.
ಅರ್ಜಿ ಸಲ್ಲಿಸುವ ವಿಧಾನ : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 26, 2024 (ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಿ)
ಗಮನಿಸಿ ಅರ್ಜಿ ಸಲ್ಲಿಸುವ ವಿಧಾನ:-
i) ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬೇಕು.
ii) ಬ್ಯಾಂಕಿನ ವೆಬ್ಸೈಟ್ ನಲ್ಲಿ ನೀಡಿರುವ ಅಪ್ಲಿಕೇಷನ್ ಡೌನ್ಲೋಡ್ ಮಾಡಿ ಅರ್ಜಿ ಸಲ್ಲಿಸಿ. (ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ)
iii) ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ,
iv) ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
v) ಅಭ್ಯರ್ಥಿಗಳು ಅರ್ಜಿ ಶುಲ್ಕದ ಡಿಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಅರ್ಜಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
Application – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473