District Court Jobs: ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪಾಸಾಗಿ,
ಸರ್ಕಾರಿ ಉದ್ಯೋಗ ಪಡೆಯಲು ಬಯಸುವವರು ಜಿಲ್ಲಾ ಕೋರ್ಟ್ಗಳಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ, ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ಕೆಳಗಿನಂತೆ ನೀಡಲಾಗಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಜಾಹೀರಾತು
ಸರ್ಕಾರಿ ಉದ್ಯೋಗ ಪಡೆಯಲು ಬಯಸುವವರು ಬೆಳಗಾವಿ ಜಿಲ್ಲಾ ನ್ಯಾಯಾಲಯ ಮತ್ತು ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಮತ್ತು ಸಿಪಾಯಿ/ಜವಾನ, ಬೆರಳಚ್ಚು ನಕಲುಗಾರರು, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಈ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಖಾಯಂ ಹುದ್ದೆಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ಕೆಳಗಿನಂತೆ ನೀಡಲಾಗಿದೆ.
ಬೆಳಗಾವಿ ಮತ್ತು ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ವಿವರ.
i) ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು
ವೇತನ ಶ್ರೇಣಿ: ₹ 27650ದಿಂದ ₹52650 ವರೆಗೆ
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪಾಸ್ ಅಥವಾ 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ.
ii) ಆದೇಶ ಜಾರಿಕಾರರು
ವೇತನ ಶ್ರೇಣಿ: ₹ 19950 ದಿಂದ ₹37900 ವರೆಗೆ
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್.
iii) ಸಿಪಾಯಿಗಳು/ಕೋರ್ಟ್ ಜವಾನ/ಸೇವಕ
ವೇತನ ಶ್ರೇಣಿ: ₹ 17000 ದಿಂದ ₹28950 ವರೆಗೆ
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಯಾವುದೇ ಹುದ್ದೆಗೆ ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಅರ್ಹತೆ ಕೆಳಗಿನಂತೆ ತಿಳಿಸಲಾಗಿದೆ.
i) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ii) ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
iii) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಅರ್ಜಿ ಶುಲ್ಕ ವಿವರ:-
i) ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗೆ ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗ, 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ii) ಆದೇಶ ಜಾರಿಕಾರರು, ಸಿಪಾಯಿಗಳು ಹುದ್ದೆಗೆ ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗ, 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕಗಳು ಈ ರೀತಿ:-
i) ತುಮಕೂರು ನ್ಯಾಯಾಲಯ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 10, 2024
ii) ಬೆಳಗಾವಿ ನ್ಯಾಯಾಲಯ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 14, 2024
ಗಮನಿಸಿ:-
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ:-
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ -2024
1- NOTIFICATION – Click here
ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ -2024
2- NOTIFICATION- Typist – Click here
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
i) ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ -2024
APPLY ONLINE- Click here.
ii) ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ -2024
APPLY ONLINE- Click here.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473