PGCET 2024: ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ./ಎಂ.ಟೆಕ್./ ಎಂ.ಆರ್ಕಿಟೆಕ್ಚ್ರ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜುಲೈ 13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10 ರಿಂದ ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಈ ಮುಂದೂಡಿಕೆ ಹಿನ್ನೆಲೆಯಲ್ಲಿ, ಪಿಜಿಸಿಇಟಿ-2024ಕ್ಕೆ ನೋಂದಣಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೂ ಕಾಲಾವಕಾಶ ವಿಸ್ತರಣೆ ಮಾಡಿ ಅಂತಿಮ ಅವಕಾಶ ಕಲ್ಪಿಸಲಾಗಿದೆ. ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಆಸಕ್ತ ಅಭ್ಯರ್ಥಿಗಳು ಜುಲೈ 7ರ ಒಳಗೆ ನೋಂದಣಿ ಮಾಡಿ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಿ ಜುಲೈ 9ರ ಸಂಜೆ 6.00 ರೊಳಗೆ ಶುಲ್ಕ ಪಾವತಿಸಬಹುದು. ನೋಂದಣಿ ಮಾಡಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನೋಡುತ್ತಿರಬೇಕೆಂದು ಸೂಚಿಸಲಾಗಿದೆ.
ಗಮನಿಸಿ:-
2010 ರಿಂದ PGCET ಪ್ರವೇಶ ಪರೀಕ್ಷಾ ತರಬೇತಿಗೆ ಹೆಸರುವಾಸಿಯಾದ IRCMD Education Centre ನಲ್ಲಿOFFLINE ಮೊದಲ ಬ್ಯಾಚು ಪ್ರಾರಂಭಗೊಂಡಿದೆ. ಸದ್ಯ ಪದವಿ ಪರೀಕ್ಷೆ ಬರೆಯುತ್ತಿರುವವರಿಗೆ ಜುಲೈ ಕೊನೆಯ ವಾರದಿಂದ ಹೊಸ ಬ್ಯಾಚ್ ಪ್ರಾರಂಭಗೊಳ್ಳುತ್ತದೆ. ಪರಿಷ್ಕೃತ ಪಠ್ಯಕ್ರಮದಂತೆ CBT (Computer Based Test) ಪ್ರವೇಶ ಪರೀಕ್ಷಾ ಪೂರಕ ರೀತಿಯಲ್ಲಿ ನುರಿತ ತರಬೇತುದಾರರಿಂದ ತರಗತಿಗಳು ಲಭ್ಯವಿದೆ. ಇಂದೇ ಸಂಪರ್ಕಿಸಿ : 9945988118
ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವೈಶಿಷ್ಟ್ಯತೆಗಳು:–
i) ಪರಿಷ್ಕೃತ ಪಠ್ಯಕ್ರಮದ ಬುಕ್ಸ್ (New Syllabus).
ii) ಶಾರ್ಟ್ ಕಟ್ ಟ್ರಿಕ್ಸ್.
iii) ಆನ್ಲೈನ್ Mock Test.
iv) ಆನ್ಲೈನ್ ಅರ್ಜಿ ಸಲ್ಲಿಕೆ.
v) ಮಾಡೆಲ್ ಪ್ರಶ್ನಾಪತ್ರಿಕೆ ರಿವಿಶನ್.
vi) ಗುಣಮಟ್ಟದ ಶಿಕ್ಷಣ.