Karnataka State Souharda Federal Co-Operative Ltd : ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಈ ಕೆಳಗೆ ನಮೂದಿಸಿರುವ ವಿವಿಧ ಹುದ್ದೆಗಳಿಗಾಗಿ ನೇಮಕ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ)
ವಿದ್ಯಾರ್ಹತೆ : ಯಾವುದೇ ಪದವಿ ಪಾಸ್. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ii) ಸಹಾಯಕರು
ವಿದ್ಯಾರ್ಹತೆ : ಯಾವುದೇ ಪದವಿ ಪಾಸ್. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
iii) ಟೈಪಿಸ್ಟ್ ಕಮ್ ಸ್ಟೆನೊ (ಸಹಾಯಕ ಶ್ರೇಣಿ)
ವಿದ್ಯಾರ್ಹತೆ : ಯಾವುದೇ ಪದವಿ ಪಾಸ್. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
iv) ಕಿರಿಯ ಸಹಾಯಕರು
ವಿದ್ಯಾರ್ಹತೆ : ಪಿಯುಸಿ ಪಾಸ್. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
v) ಸನ್ನದು ಲೆಕ್ಕಪರಿಶೋಧಕರು (Charted Accountant)
ವಿದ್ಯಾರ್ಹತೆ : ಸಿಎ/ ಸಿಎಸ್ /ICWA. ಅನುಭವ ಹೊಂದಿರುವವರಿಗೆ ಆದ್ಯತೆ, ಸದರಿ ಹುದ್ದೆಗೆ ಗರಿಷ್ಠ ವಯಸ್ಸು 35 ವರ್ಷ.
vi) ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ)
ವಿದ್ಯಾರ್ಹತೆ : ಕಾನೂನು ಪದವಿ ಜತೆಗೆ ಕಂಪ್ಯೂಟರ್ ಪರಿಣಿತಿ ಕಡ್ಡಾಯ. ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುಭವ ಹೊಂದಿದವರಿಗೆ ಆದ್ಯತೆ. ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
vii) ಮಾನವ ಸಂಪನ್ಮೂಲ ಅಧಿಕಾರಿ (ಎಂಬಿಎ, ಹೆಚ್.ಆರ್ ) (ಅಧಿಕಾರಿ ಶ್ರೇಣಿ)
ವಿದ್ಯಾರ್ಹತೆ : ಎಂಬಿಎ, ಹೆಚ್.ಆರ್ ಪದವಿ. ಗರಿಷ್ಠ 35 ವರ್ಷ ಮೀರಿರಬಾರದು.
viii) ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ)
ವಿದ್ಯಾರ್ಹತೆ : ಎಂಎ ಕನ್ನಡ ಅಥವಾ MSW ಪದವಿ. 3 ವರ್ಷ ಕನಿಷ್ಠ ಕಾರ್ಯಾನುಭವ. ಗರಿಷ್ಠ 35 ವರ್ಷ.
ix) ಉಪಸಿಬ್ಬಂದಿ ಕಮ್ ವಾಹನ ಚಾಲಕ
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಪಾಸ್. ಡಿಎಲ್ ಹೊಂದಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
ಮೇಲಿನ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು www.souharda.coop ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಹಾಗೂ ಅದರೊಂದಿಗೆ ಅರ್ಹತಾ ದಾಖಲೆಗಳು / ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ,
ಸೌಹಾರ್ಧ ಸಹಕಾರಿ ಸೌಧ, ನಂ 68,
ಒಂದನೇ ಮಹಡಿ, 17 & 18ನೇ ಅಡ್ಡರಸ್ತೆ ಮಧ್ಯೆ,
ಮಾರ್ಗೋಸಾ ರಸ್ತೆ, ಮಲ್ಲೇಶ್ವರಂ,
ಬೆಂಗಳೂರು -560055.
ದೂರವಾಣಿ ಸಂಖ್ಯೆ : 080-23378375.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-07-2024 ರ ಸಂಜೆ 05-30 ಗಂಟೆಯೊಳಗೆ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION-ಕ್ಲಿಕ್ ಮಾಡಿ.
ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
Application Form Download – ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473