IDFC FIRST Bank MBA Scholarship : ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್. ಐಡಿಎಫ್ಸಿ ಫಸ್ಟ್ ಬ್ಯಾಂಕ್ ನೀಡುವ ಸ್ಕಾಲರ್ಶಿಪ್ಗೆ ಅರ್ಜಿ ಆಹ್ವಾನಿಸಲಾಗಿದೆ. 2 ಲಕ್ಷ ರೂ. ನೀಡುವ ಸ್ಕಾಲರ್ಶಿಪ್ ಇದಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಐಡಿಎಫ್ಸಿ ಫಸ್ಟ್ ಬ್ಯಾಂಕ್ ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು 2018ರಲ್ಲಿ ಪರಿಚಯಿಸಿದೆ. ಈ ಯೋಜನೆ ಮೂಲಕ ಅರ್ಹ ವಿದ್ಯಾರ್ಥಿಗಳ ಶಿಕ್ಷಣಕ್ಕೆ 2 ಲಕ್ಷ ರೂ. ನೆರವು ಒದಗಿಸಲಾಗುತ್ತದೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ಈ ಬಾರಿಯ ಸ್ಕಾಲರ್ಶಿಪ್ನ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ 31- ಜುಲೈ – 2024. ಸ್ಕಾಲರ್ಶಿಪ್ಗೆ ಈ ಕೆಳಗಿನ ಅರ್ಹತೆ ಅಗತ್ಯ.
ಐಡಿಎಫ್ಸಿ ಫಸ್ಟ್ ಬ್ಯಾಂಕ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ಭಾರತೀಯ ನಾಗರಿಕರಾಗಿರಬೇಕು.
ii) ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು.
iii) ಪಟ್ಟಿಯಲ್ಲಿ ಇರುವ ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು (ಕಾಲೇಜಿನ ಪಟ್ಟಿ ಕೆಳಗೆ ನೀಡಲಾಗಿದೆ).
iv) 2 ವರ್ಷಗಳ ಪೂರ್ಣ ಅವಧಿಯ ಎಂಬಿಎ ಕೋರ್ಸ್ನ ಮೊದಲ ವರ್ಷದಲ್ಲಿರಬೇಕು.
v) ಆಧಾರ್ ನಂಬರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಹೊಂದಿರಬೇಕು.
ಆಯ್ಕೆಯಾದ MBA ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪೂರ್ಣ ಸಮಯದ MBA ಅಧ್ಯಯನಕ್ಕಾಗಿ INR 2,00,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ (ವರ್ಷಕ್ಕೆ INR 1 ಲಕ್ಷ, ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ*).
ಕಾಲೇಜಿನ ಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ-
List of Institutions- Click.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-ಜುಲೈ-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473