India Post Recruitment 2024 : ಭಾರತೀಯ ಅಂಚೆ ಇಲಾಖೆಯು ಬ್ರಾಂಚ್ ಪೋಸ್ಟ್ಮಾಸ್ಟರ್ (ಬಿಪಿಎಂ)/ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್ (ಎಬಿಪಿಎಂ)/ ಗ್ರಾಮಿಕ್ ಡಾಕ್ ಸೇವಕ್ (ಜಿಡಿಎಸ್) ಪೋಸ್ಟ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 44,228 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
10 ನೇ ತರಗತಿ ಉತ್ತೀರ್ಣರಾದವರಿಗೆ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, (ಇಂಡಿಯಾ ಪೋಸ್ಟ್ ಜಿಡಿಎಸ್ ಖಾಲಿ) ಇದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ 44,228 ಹುದ್ದೆಗಳಿಗೆ ಬಂಪರ್ ನೇಮಕಾತಿ (ಪೋಸ್ಟ್ ಆಫೀಸ್ ಜಿಡಿಎಸ್ ಖಾಲಿ ಹುದ್ದೆ) ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಹುದ್ದೆಗಳ ವಿವರ :-
i) ಬ್ರ್ಯಾಂಚ್ ಪೋಸ್ಟ್ಮಾಸ್ಟರ್ (BPM)
ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ ಆಗಿರಬೇಕು & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
ವೇತನ ಶ್ರೇಣಿ:Rs.12,000-29,380
ii) ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM)
ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ ಆಗಿರಬೇಕು & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
ವೇತನ ಶ್ರೇಣಿ: Rs.10,000-24,470.
iii) ಡಾಕ್ ಸೇವಕ್
ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ ಆಗಿರಬೇಕು & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವೇತನ ಶ್ರೇಣಿ: Rs.10,000-24,470.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕ 05-08-2024 ಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ 5 ವರ್ಷ, ಆರ್ಥಿಕವಾಗಿ ಹಿಂದುಳಿದ ಕೆಟಗರಿಯವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅಪ್ಲಿಕೇಶನ್ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮೊದಲ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳದಿದ್ದಲ್ಲಿ, ಮತ್ತೆ 2ನೇ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ 100 ರೂಪಾಯಿ.
ಎಲ್ಲಾ ಮಹಿಳಾ ಅರ್ಜಿದಾರರು, SC/ST ಅರ್ಜಿದಾರರು, PwD ಅರ್ಜಿದಾರರು ಮತ್ತು ಟ್ರಾನ್ಸ್ವುಮೆನ್ ಅರ್ಜಿದಾರರಿಗೆ ಶುಲ್ಕದ ಪಾವತಿಯಲ್ಲಿ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-08-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION-ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473