Bhartiya Aviation Services : ಭಾರತೀಯ ಏವಿಯೇಷನ್ ಸೇವೆಗಳು ISO 9001:2015 ಪ್ರಮಾಣೀಕೃತ ಕಂಪನಿ ಮತ್ತು ವೃತ್ತಿಪರ ತಂಡವಾಗಿದ್ದು, ಏವಿಯೇಷನ್ ಉದ್ಯಮದಲ್ಲಿ 40 ವರ್ಷಗಳಿಗಿಂತ ಹೆಚ್ಚು ಸಂಯೋಜಿತ ಅನುಭವವನ್ನು ಹೊಂದಿರುವ ವೃತ್ತಿಪರರು ನಿರ್ವಹಿಸುತ್ತಾರೆ. ಬಿಎಎಸ್ ಸಂಸ್ಥೆಯು ತನ್ನಲ್ಲಿ ಅಗತ್ಯ ಇರುವ ಕಸ್ಟಮರ್ ಸರ್ವೀಸ್ ಏಜೆಂಟ್, ಹೌಸ್ಕೀಪಿಂಗ್ ಹಾಗೂ ಲೋಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಭಾರತೀಯ ಏವಿಯೇಷನ್ ಸರ್ವೀಸೆಸ್ ಖಾಲಿ ಇರುವ ಕಸ್ಟಮರ್ ಸರ್ವೀಸ್ ಏಜೆಂಟ್ (ಸಿಎಸ್ಎ), ಲೋಡರ್/ ಹೌಸ್ಕೀಪಿಂಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಲು ಅಕ್ಟೋಬರ್ 31, 2024 ರವರೆಗೆ ಅವಕಾಶ ನೀಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಸ್ಟಮರ್ ಸರ್ವೀಸ್ ಏಜೆಂಟ್ (ಸಿಎಸ್ಎ) – 2653
ವಿದ್ಯಾರ್ಹತೆ: ದ್ವಿತೀಯ ಪಿಯುಸಿ / 12ನೇ ತರಗತಿಯನ್ನು ಪಾಸ್.
ವೇತನ ಶ್ರೇಣಿ: Rs.13,000-30,000.
ii) ಲೋಡರ್/ ಹೌಸ್ಕೀಪಿಂಗ್ – 855
ವಿದ್ಯಾರ್ಹತೆ: ಹತ್ತನೇ ತರಗತಿ ಅಥವಾ ಎಸ್ಎಸ್ಎಲ್ಸಿ ಪಾಸ್.
ವೇತನ ಶ್ರೇಣಿ:Rs.12,000-22,000.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಮೀರಿರಬಾರದು. ಕಸ್ಟಮರ್ ಸರ್ವೀಸ್ ಏಜೆಂಟ್ ಹುದ್ದೆಗೆ ಗರಿಷ್ಠ 28 ವರ್ಷ ಮೀರಿರಬಾರದು. ಲೋಡರ್/ ಹೌಸ್ಕೀಪಿಂಗ್ ಹುದ್ದೆಗೆ ಗರಿಷ್ಠ 33 ವರ್ಷ ಮೀರಿರಬಾರದು. ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ, ಒಬಿಸಿ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗ, ಬಳ್ಳಾರಿ, ದಾವಣಗೆರೆ, ಹಾಸನ.
ಅರ್ಜಿ ಶುಲ್ಕ ವಿವರ:-
i) ಕಸ್ಟಮರ್ ಸರ್ವೀಸ್ ಏಜೆಂಟ್ : ರೂ.380.
ii) ಲೋಡರ್/ ಹೌಸ್ಕೀಪಿಂಗ್ : ರೂ.340.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-10-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473