HDFC Bank Parivartan’s ECSS Programme 2024-25 : HDFC ಬ್ಯಾಂಕ್ ಭಾರತದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾಗಿದೆ ಮತ್ತು HDFC ಪರಿವರ್ತನ್ ವಿದ್ಯಾರ್ಥಿವೇತನ 2024 (HDFC ಬ್ಯಾಂಕ್ ಉಚಿತ ವಿದ್ಯಾರ್ಥಿವೇತನ) ಎಂದೂ ಕರೆಯಲ್ಪಡುವ ಪ್ರಮುಖ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ . ಈ ವಿದ್ಯಾರ್ಥಿವೇತನ ಕಾರ್ಯಕ್ರಮವು 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ಪಾಲಿಟೆಕ್ನಿಕ್, ITI, UG, ಮತ್ತು PG (ಸಾಮಾನ್ಯ ಮತ್ತು ವೃತ್ತಿಪರ) ಕಾರ್ಯಕ್ರಮಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ರೂ. 75,000 ರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
HDFC ಬ್ಯಾಂಕ್ ಪರಿವರ್ತನ್ ಸ್ಕಾಲರ್ಶಿಪ್ ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ವಿದ್ಯಾರ್ಥಿವೇತನ ಮೊತ್ತದ ವಿವರ
Category-I
ಶಾಲಾ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಪರಿವರ್ತನ್ ಸ್ಕಾಲರ್ಶಿಪ್ .
1 ರಿಂದ 6 ನೇ ತರಗತಿಗೆ: ₹ 15,000
7 ರಿಂದ 12 ನೇ ತರಗತಿ, ಡಿಪ್ಲೊಮಾ, ITI ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ: ₹ 18,000
Category-II
ಪದವಿಪೂರ್ವ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಪರಿವರ್ತನ್ ಸ್ಕಾಲರ್ಶಿಪ್.
ಸಾಮಾನ್ಯ ಪದವಿಪೂರ್ವ ವಿದ್ಯಾರ್ಥಿಗಳಿಗೆ: ₹ 30,000
ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ: ₹ 50,000
Category-III
ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ HDFC ಬ್ಯಾಂಕ್ ಪರಿವರ್ತನ್ ಸ್ಕಾಲರ್ಶಿಪ್.
ಸಾಮಾನ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹ 35,000
ವೃತ್ತಿಪರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹ 75,000
ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ii) ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-ಡಿಸೆಂಬರ್-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473